ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ
ಮಳವಳ್ಳಿ: ಪಟ್ಟಣದ ನ್ಯೂ ರೇಬೋ ಕಿಡ್ಸ್ ಸಂಸ್ಥೆಯ ವತಿಯಿಂದ ಪುಟಾಣಿ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ವಿದ್ಯಾ ಅವರು ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ವಿದ್ಯಾ ಅವರು, ಪ್ರಸ್ತುತ ದಿನಗಳಲ್ಲಿ ಪ್ಲಾಸ್ಟಿಕ್ ಅತಿಯಾದ ಬಳಕೆಯಿಂದಾಗಿ ಪರಿಸರ ಸಂಪೂರ್ಣವಾಗಿ ಹಾಳಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಬೇಕಾಗಿದೆ. ಕೇವಲ ಭಾಷಣಕ್ಕೆ ಸೀಮಿತವಾಗದೆ, ಎಲ್ಲಾ ಖಾಲಿ ಜಾಗಗಳಲ್ಲೂ ಗಿಡಗಳನ್ನು ನೆಟ್ಟು, ಅವುಗಳಿಗೆ ನಿಯಮಿತವಾಗಿ ನೀರು…

