ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಶಿವಕುಮಾರ್ ಎಮ್.ಎಸ್. ದೊಡ್ಡಿ ನೇಮಕ
ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಚಾಮರಾಜನಗರ ಜಿಲ್ಲಾ ಸಂಯೋಜಕರನ್ನಾಗಿ ಶಿವಕುಮಾರ್ ಎಮ್.ಎಸ್. ದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಯಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಮಧುಸೂದನ್ ಅವರು ಶಿವಕುಮಾರ್ ಅವರಿಗೆ ಅಧಿಕೃತ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದರು. ನೇಮಕಾತಿ ಆದೇಶ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಎಮ್.ಎಸ್. ದೊಡ್ಡಿ, “ಮಾಜಿ…

