ದಂಟಳ್ಳಿ ಏತ ನೀರಾವರಿ ಯೋಜನೆಗೆ ಆಗ್ರಹ: ರೈತರ ಅಹೋರಾತ್ರಿ ಧರಣಿ 131ನೇ ದಿನಕ್ಕೆ
ಹನೂರು: ತಾಲೂಕಿನ ವಡಕೆಹಳ್ಳದಲ್ಲಿ ಕಾವೇರಿ ನದಿಯಿಂದ ದಂಟಳ್ಳಿ ಏತನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತನೀರಾವರಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿಯು ಗುರುವಾರ 131ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟದ ಕಾವು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಕಳೆದ 2025ರ ಅಕ್ಟೋಬರ್ 27ರಿಂದಲೂ ಈ ಭಾಗದ ರೈತರು, ಮಹಿಳೆಯರು ಹಾಗೂ ಮಕ್ಕಳು ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಅಂತರ್ಜಲ ಅಭಿವೃದ್ಧಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ….

