ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮೃತರ ಕುಟುಂಬಕ್ಕೆ ಮಾಜಿ ಶಾಸಕ ಆರ್. ನರೇಂದ್ರ ಸಾಂತ್ವನ, ಪರಿಹಾರ ವಿತರಣೆ
ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಸ್ಥರನ್ನು ಮಾಜಿ ಶಾಸಕ ಆರ್. ನರೇಂದ್ರ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದ ಆವರಣದಲ್ಲಿ ಮೃತರ ಕುಟುಂಬಕ್ಕೆ ಸಾರಿಗೆ ನಿಗಮದ ವತಿಯಿಂದ ನೀಡಲಾದ ಮೊದಲ ಹಂತದ ಪರಿಹಾರದ ಮೊತ್ತವಾದ ಇಪ್ಪತೈದು ಸಾವಿರ ರೂಪಾಯಿಗಳನ್ನು ಇದೇ ವೇಳೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಸಾರಿಗೆ ನಿಗಮದ ಅಧಿಕಾರಿಗಳ ಮೂಲಕ ಮೃತರ ಕುಟುಂಬಕ್ಕೆ ತಕ್ಷಣದ ನೆರವು…

