ಮಾರ್ಕೋನಹಳ್ಳಿ ಡ್ಯಾಂನಲ್ಲಿ ಭೀಕರ ದುರಂತ: ಈಜಲು ಹೋಗಿ ಆರು ಜನ ಜಲಸಮಾಧಿ
ತುಮಕೂರು/ಕುಣಿಗಲ್: ಜಿಲ್ಲೆಯ ಕುಣಿಗಲ್ ತಾಲ್ಲೂಕು ಯಡಿಯೂರು ಸಮೀಪದ ಮಾರ್ಕೋನಹಳ್ಳಿ ಅಣೆಕಟ್ಟು (ಡ್ಯಾಂ) ನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಜನ ನೀರು ಪಾಲಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಡ್ಯಾಂನಲ್ಲಿ ಒಟ್ಟು ಎಂಟು ಜನ ಈಜಲು ಹೋಗಿದ್ದಾಗ ದುರಂತ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ತಿಳಿದುಬಂದಿದೆ. ತಬಾಸುಮ್ (45), ಶಬಾನ (44), ಮಿಫ್ರಾ (4), ಮಹಿಬ್ (1), ಸಾಜಿಯಾ ಮತ್ತು ಅರ್ಬಿನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ….

