ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಬಲಿಯಾದ ಮಾಜಿ ಪಾಲಿಕೆ ಸದಸ್ಯ; ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ದಾವಣಗೇರೆ:ಕೌಟುಂಬಿಕ ಕಲಹದ ಕಿಚ್ಚು ದಾವಣಗೆರೆಯಲ್ಲಿ ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ದಾವಣಗೆರೆಯ ನಾಗನೂರು ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಈ ಭೀಭತ್ಸ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮಕ್ಕಳ ಈ…

