ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: ಧಾರವಾಡ ಮೂಲದ 6 ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು…

Read More

ತೂಗು ಸೇತುವೆ ಮನುಷ್ಯ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಯ ರೂವಾರಿ ಇನ್ನಿಲ್ಲ

ದಕ್ಷಿಣ ಕನ್ನಡ: ದೇಶಾದ್ಯಂತ ‘ಭಾರತದ ಸೇತುವೆ ಮನುಷ್ಯ’ (Bridge Man of India) ಹಾಗೂ ತೂಗು ಸೇತುವೆಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳ ಹಿಂದೆ ಉತ್ತರಾಖಂಡದ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಪತ್ನಿ ಉಷಾ ಅವರನ್ನು…

Read More

10 ಸಾವಿರ ರೂ.ಗಾಗಿ ಬಲಿಯಾದ ಬಿಸಿಎ ವಿದ್ಯಾರ್ಥಿನಿಯ ಜೀವ: ಶುಲ್ಕ ಪಾವತಿಸಲಾಗದೆ ಹಾಲ್‌ಟಿಕೆಟ್ ಸಿಗದೆ ಆತ್ಮಹತ್ಯೆ

ಭಟ್ಕಳ: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಮರಳಿ ನೀಡದೆ ವಂಚಿಸಿದ ಹಿನ್ನೆಲೆಯಲ್ಲಿ ಮನನೊಂದ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಭಟ್ಕಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗಾಯತ್ರಿಯ ತಂದೆ ನಾಗರಾಜ ಅವರು ಮಗಳ ಕಾಲೇಜು…

Read More

ಅಂಕೋಲಾದಲ್ಲಿ ಭೂ ಹಗರಣದ ವಾಸನೆ: ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ‘ಜೀವಂತ’ ಎಂದು ದಾಖಲೆ ತಿದ್ದುಪಡಿ ಮಾಡಿ ಜಮೀನು ಮಾರಾಟ!

ಕಾರವಾರ, ಜೂ. 13: ನಾಲ್ಕು ದಶಕಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯನ್ನು ಬದುಕಿದ್ದಾನೆ ಎಂದು ದಾಖಲೆಗಳನ್ನು ತಿದ್ದುಪಡಿ ಮಾಡಿ, ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿರುವ ಆತಂಕಕಾರಿ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಭೂ ದಾಖಲೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವ ಈ ಪ್ರಕರಣವನ್ನು ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. 2026ರ ಫೆಬ್ರವರಿ 26ರಂದು ಅಂಕೋಲಾ ಉಪ ನೋಂದಣಿ ಕಚೇರಿಯಲ್ಲಿ ನಡೆದ ಜಮೀನು ನೋಂದಣಿ ಪ್ರಕ್ರಿಯೆಯ ವೇಳೆ ಈ…

Read More

ಶಿರಸಿ ಸರ್ಕಾರಿ ವಸತಿ ನಿಲಯದಲ್ಲಿ ಆಘಾತಕಾರಿ ಘಟನೆಶೌಚಾಲಯದಲ್ಲಿ ಹೆರಿಗೆ ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ; ಮಗು ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಸಮೀಪದ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ಪರಿಣಾಮ ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ವಸತಿ ನಿಲಯದಲ್ಲಿ ವಾಸವಾಗಿದ್ದ ಸುಮಾರು 15 ವರ್ಷದ ಬಾಲಕಿ ಯಾರಿಗೂ ತಿಳಿಯದಂತೆ ಹಾಸ್ಟೆಲ್‌ನ ಶೌಚಾಲಯದಲ್ಲೇ ಹೆರಿಗೆ ಮಾಡಿಕೊಂಡಿದ್ದಾಳೆ. ಹೆರಿಗೆಯಾದ ಬಳಿಕ ಗಾಬರಿಗೊಂಡಿದ್ದ ಬಾಲಕಿ ಅಥವಾ ವಿಷಯವನ್ನು ಮರೆಮಾಚುವ ಉದ್ದೇಶದಿಂದ ನವಜಾತ…

Read More

“ಗಾಡ್ ಪ್ರಾಮಿಸ್” ಚಿತ್ರೀಕರಣ ಪೂರ್ಣ; ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕುಂದಾಪುರ: “ಗಾಡ್ ಪ್ರಾಮಿಸ್” ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ ಚಿತ್ರತಂಡವು ಕುಂದಾಪುರ ಸಮೀಪದ ಪ್ರಸಿದ್ಧ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಮೂಡು ಗಣಪತಿ ಪೂಜೆಯನ್ನು ನೆರವೇರಿಸಿತು. ಚಿತ್ರಕ್ಕೆ ಕಥೆ, ನಿರ್ದೇಶನ ಹಾಗೂ ನಾಯಕನಾಗಿ ಸುಚನ್ ಶೆಟ್ಟಿ ಕಾರ್ಯನಿರ್ವಹಿಸಿದ್ದು, ಕುಟುಂಬ, ನಂಬಿಕೆ ಹಾಗೂ ಕರಾವಳಿ ಭಾಗದ ಸಂಸ್ಕೃತಿಯನ್ನು ಒಳಗೊಂಡ ಮನರಂಜನಾ ಕಥಾಹಂದರವನ್ನು ಚಿತ್ರ ಹೊಂದಿದೆ. ಚಿತ್ರೀಕರಣ ಪೂರ್ಣಗೊಂಡ ಸಂತಸದ ಹಿನ್ನೆಲೆಯಲ್ಲಿ ನಡೆದ ಪೂಜೆಯಲ್ಲಿ ಸುಚನ್ ಶೆಟ್ಟಿ, ಪ್ರಶಾಂತ್ ಸಿದ್ದಿ, ನಾಗರಾಜ್ ಬೈಂದೂರು, ನಿರ್ಮಾಪಕ ಮಹೇಂದ್ರ ಶೆಟ್ಟಿ, ಸಂಕಲನಕಾರ…

Read More

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ: ಸಿಎಂ ಮೊರೆ ಹೋದ ಸಂತ್ರಸ್ತ ಮಹಿಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಮಹಿಳೆಯೊಬ್ಬರು ಅತ್ಯಂತ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆಯ ಆರೋಪ ಮಾಡಿದ್ದು, ಈ ಪ್ರಕರಣ ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಇನ್ಸ್‌ಪೆಕ್ಟರ್ ಕಿರುಕುಳ ತಾಳಲಾರದೆ ತಾಕೋಡೆ ಗ್ರಾಮದ ನೊಂದ ಮಹಿಳೆಯು ಇದೀಗ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಎಂಟು ಪುಟಗಳ ಸುದೀರ್ಘ ದೂರು ಸಲ್ಲಿಸಿದ್ದಾರೆ. ​ತನ್ನ ಪತಿಯನ್ನು ವಿನಾಕಾರಣ ಬಂಧಿಸಿರುವ ಇನ್ಸ್‌ಪೆಕ್ಟರ್…

Read More

ಭ್ರೂಣ ಹತ್ಯೆ ತಡೆಯಿರಿ, ರಾಜ್ಯದಲ್ಲಿ ಮದ್ಯ ನಿಷೇಧಿಸಿ: ಮಕ್ಕಳ ಹಕ್ಕುಗಳ ಸಂವಾದದಲ್ಲಿ ವಿದ್ಯಾರ್ಥಿಗಳಿಂದ ದೂರು-ಸಲಹೆಗಳ ಮಹಾಪೂರ

ಕಾರವಾರ: ನ 29:ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಕೈಗೊಂಡ ಕ್ರಮಗಳು ಏನು? ಶಾಲಾ-ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಿ, ಅಪ್ರಾಪ್ತ ವಿದ್ಯಾರ್ಥಿಗಳ ವಾಹನ ಚಾಲನೆ ತಡೆಯಲು ಕ್ರಮ ಕೈಗೊಳ್ಳಿ ಹಾಗೂ ಮದ್ಯ ಮುಕ್ತ ರಾಜ್ಯವನ್ನಾಗಿ ಏಕೆ ಮಾಡುವುದಿಲ್ಲ? – ಇಂತಹ ಹತ್ತಾರು ಗಂಭೀರ ಪ್ರಶ್ನೆಗಳು ಮತ್ತು ಸಲಹೆಗಳ ಮಹಾಪೂರವನ್ನು ಅಂಕೋಲಾದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಎದುರು ಹರಿಯಬಿಟ್ಟರು. ​ಅಂಕೋಲಾದ ಪಿ.ಎಂ. ಹೈಸ್ಕೂಲ್‌ನಲ್ಲಿ ಶನಿವಾರ…

Read More

ಪುತ್ತೂರಿಗೆ ವೈದ್ಯಕೀಯ ಕಾಲೇಜು; ದಕ್ಷಿಣ ಕನ್ನಡದಲ್ಲಿ ಕೋಮು ಸೌಹಾರ್ದಕ್ಕೆ ಒತ್ತು ನೀಡಿ: ಸಿಎಂ ಸಿದ್ದರಾಮಯ್ಯ ಕರೆ

‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಘೋಷಣೆ; ಗ್ಯಾರಂಟಿ ಟೀಕಿಸಿದವರಿಗೆ ತಿರುಗೇಟು ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸೋಮವಾರ (ಅಕ್ಟೋಬರ್ ೨೦) ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ – ೨೦೨೫’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಪುತ್ತೂರಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದರು. ಇದೇ ವೇಳೆ, ರಾಜ್ಯದ ಅಭಿವೃದ್ಧಿಗೆ ಕೋಮು ಸೌಹಾರ್ದತೆ ಅತ್ಯಗತ್ಯ ಎಂದು ಪ್ರತಿಪಾದಿಸಿ, ಸುಳ್ಳು…

Read More

ಪುತ್ತೂರಿನಲ್ಲಿ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ೧2ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸೋಮವಾರ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಆಯೋಜಿಸಿದ್ದ ‘ಅಶೋಕ ಜನಮನ – ೨೦೨೫’ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮದಿಂದ ನೂಕುನುಗ್ಗಲು ಉಂಟಾಗಿ ೧೩ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಅಸ್ವಸ್ಥರಾದವರನ್ನು ತಕ್ಷಣವೇ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರತಿ ವರ್ಷ ರೈ ಎಸ್ಟೇಟ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ವಿತರಣೆ ಕಾರ್ಯಕ್ರಮವನ್ನು…

Read More