ಡಿಎನ್‌ಎ ರುಜುವಾತು: ಯುವತಿಯನ್ನು ಮದುವೆಯಾಗಲೇಬೇಕು, ತಪ್ಪಿದರೆ ಧರಣಿ: ಕೃಷ್ಣ ರಾವ್‌ಗೆ ಪ್ರತಿಭಾ ಕುಳಾಯಿ ಎಚ್ಚರಿಕೆ
ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸಲು ಸ್ವಂತ ಖರ್ಚಿನಲ್ಲಿ ವಿವಾಹ ಮಾಡುತ್ತೇನೆ; ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ಮಂಗಳೂರು: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್‌ಎ ಪರೀಕ್ಷೆಯಲ್ಲಿ ರುಜುವಾತಾಗಿರುವ ಹಿನ್ನೆಲೆಯಲ್ಲಿ, ಆತ ಮಗುವಿನ ತಾಯಿಯನ್ನು ಕೂಡಲೇ ವಿವಾಹವಾಗಬೇಕು. ತಪ್ಪಿದಲ್ಲಿ, ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು…

