ಕಳಪೆ ಕಾಮಗಾರಿಗೆ ಮಕ್ಕಳ ಜೀವ ಬಲಿ? ಬಲಕುಂದಿ ಸರ್ಕಾರಿ ಶಾಲೆಯ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ; ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯದ್ವಾರದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದುರ್ಘಟನೆ ಶಾಲೆಯಲ್ಲಿನ ಕಳಪೆ ಕಾಮಗಾರಿ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ನಯನಾ ಕುಮಾರಿ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಗೇಟ್ ಆಕೆಯ ಮೇಲೆ ಬಿದ್ದ ಪರಿಣಾಮ ಮೂಗಿಗೆ ತೀವ್ರ ಪೆಟ್ಟು…

