ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರಿಗೆ ಮೂಲಸೌಕರ್ಯ ಕೊರತೆ: ಸಮಗ್ರ ಅಭಿವೃದ್ಧಿಗೆ ನವಯುಗ ಸಂಘಟನೆ ಆಗ್ರಹ

ಬೆಳಗಾವಿ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಶ್ರೀ ಯಲ್ಲಮ್ಮನ ಗುಡ್ಡಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕನಿಷ್ಠ ಮೂಲಸೌಕರ್ಯಗಳೂ ಇಲ್ಲದೆ ತೀವ್ರ ತೊಂದರೆಯಾಗುತ್ತಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ‘ನವಯುಗ ಸಂಘಟನೆ’ಯು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರತಿ ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ಲಕ್ಷಾಂತರ ಜನ ಸೇರುವ ಈ ಪುಣ್ಯಕ್ಷೇತ್ರದಲ್ಲಿ ವ್ಯವಸ್ಥೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಸಂಘಟನೆಯು ಆಕ್ರೋಶ ವ್ಯಕ್ತಪಡಿಸಿದೆ. ​ಜೋಗುಳ ಭಾವಿ ಹಾಗೂ ಸತ್ಯವ್ವಾ ದೇವಸ್ಥಾನದ ಬಳಿ ಮಹಿಳಾ ಭಕ್ತರಿಗೆ…

Read More

​ಬೈಲಹೊಂಗಲ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತ; ಬಿಸಿ ಪದಾರ್ಥ ಸೋರಿಕೆಯಾಗಿ ಮೂವರು ಕಾರ್ಮಿಕರ ಸಾವು ಕೆಲವರಿಗೆ ಗಾಯ,

​ಬೈಲಹೊಂಗಲ: ತಾಲ್ಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಎವಿಸಿಪಿ ನಂ-1ರ ಕಂಪಾರ್ಟ್‌ಮೆಂಟ್ ವಾಲ್ ದುರಸ್ತಿ ಕಾರ್ಯದ ವೇಳೆ ಏಕಾಏಕಿ ಕುದಿಯುವ ಬಿಸಿ ಪದಾರ್ಥ ಸೋರಿಕೆಯಾದ ಪರಿಣಾಮ ಈ ಸಾವು-ನೋವು ಸಂಭವಿಸಿದೆ. ​ಸುಮಾರು 40 ಅಡಿ ಎತ್ತರದಲ್ಲಿರುವ ವಾಲ್ ದುರಸ್ತಿ ಕಾರ್ಯಕ್ಕಾಗಿ ಎವಿಸಿಪಿ ನಂ-1ನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾರ್ಮಿಕರು ವಾಲ್‌ನ ನಟ್ ಬೋಲ್ಟ್‌ಗಳನ್ನು ತೆಗೆಯುತ್ತಿದ್ದ…

Read More

​ಬೈಲಹೊಂಗಲ: ಭೂಪರಿಹಾರ ವಿಳಂಬ; ಉಪವಿಭಾಗಾಧಿಕಾರಿಗಳ ವಾಹನ, ಕಂಪ್ಯೂಟರ್‌ಗಳ ಜಪ್ತಿ

​ಬೈಲಹೊಂಗಲ: ಪಟ್ಟಣದ ಒಳಚರಂಡಿ ಮತ್ತು ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿಗೆ ನ್ಯಾಯಯುತ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಸೋಮವಾರ ಉಪವಿಭಾಗಾಧಿಕಾರಿಗಳ (ಎಸಿ) ಸರ್ಕಾರಿ ವಾಹನ ಹಾಗೂ ಕಂಪ್ಯೂಟರ್‌ ಸೇರಿದಂತೆ ವಿವಿಧ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ​ಪಟ್ಟಣದ ಒಳಚರಂಡಿ ಯೋಜನೆಗಾಗಿ ನಬೀಸಾಬ ಬೇಪಾರಿ, ಇಮಾಮಹುಸೇನ ಬೇಪಾರಿ ಸೇರಿದಂತೆ ಅವರ ಕುಟುಂಬದ ಒಟ್ಟು 14 ಎಕರೆ 13 ಗುಂಟೆ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ರೈತರು…

Read More

​ಪ್ರಾಂತೀಯ ಅಸಮಾನತೆ ನಿವಾರಣೆಗೆ ನಮ್ಮ ಸರ್ಕಾರ ಬದ್ಧ: ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

​ಬೆಳಗಾವಿ: “ರಾಜ್ಯದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ಮತ್ತು ಉತ್ತರ ಕರ್ನಾಟಕದ ನಡುವಿನ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಸದನದಲ್ಲಿ ನಡೆದ ಸುದೀರ್ಘ ಚರ್ಚೆಗೆ ಉತ್ತರಿಸಿದ ಅವರು, ಅಧಿವೇಶನದ ಎರಡನೇ ದಿನವೇ ಈ ವಿಷಯದ ಬಗ್ಗೆ ಚರ್ಚೆ ಆರಂಭವಾಗಿರುವುದು ಇದೇ ಮೊದಲು ಎಂದು…

Read More

​ಭೂಮಿ ಜೀವದ ತೊಟ್ಟಿಲು, ಅದನ್ನು ಬಂಜೆ ಮಾಡಬಾರದು: ಮಣ್ಣಿನ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಳಗಾವಿ: “ಭೂಮಿಯು ಜೀವದ ತೊಟ್ಟಿಲಾಗಿದ್ದು, ಅತಿಯಾದ ರಸಗೊಬ್ಬರ ಬಳಕೆಯ ಮೂಲಕ ಅಂತಹ ಪವಿತ್ರ ಭೂಮಿಯನ್ನು ಬಂಜೆ ಮಾಡಬಾರದು. ಕೃಷಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ರೈತರು ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ​ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಮಾಡುವ ನೂತನ ಯೋಜನೆಗೆ…

Read More

​ವಿಶೇಷ ವರದಿ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ಮತ್ತು ನಂಜುಂಡಪ್ಪ ವರದಿಯ ಮರುಚಿಂತನೆ – ಹಿಂದುಳಿದಿರುವಿಕೆ ನೀಗಲು ಬೇಕಿದೆ ಕಠಿಣ ಸಂಕಲ್ಪ

​ಬೆಳಗಾವಿ/ಹುಬ್ಬಳ್ಳಿ: ಕರ್ನಾಟಕ ರಾಜ್ಯವು ಆರ್ಥಿಕವಾಗಿ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿ ಬೆಳೆಯುತ್ತಿದ್ದರೂ, ‘ಪ್ರಾದೇಶಿಕ ಅಸಮತೋಲನ’ ಎನ್ನುವ ಶಾಪ ರಾಜ್ಯವನ್ನು ದಶಕಗಳಿಂದ ಪೀಡಿಸುತ್ತಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದ್ದರೆ, ಉತ್ತರ ಕರ್ನಾಟಕದ ಜಿಲ್ಲೆಗಳು ಇಂದಿಗೂ ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯದಂತಹ ಕನಿಷ್ಠ ಸೌಲಭ್ಯಗಳಿಗಾಗಿ ಮಲತಾಯಿ ಧೋರಣೆಯನ್ನು ಎದುರಿಸುತ್ತಿವೆ. ಈ ಅಸಮಾನತೆಯನ್ನು ಹೋಗಲಾಡಿಸಲು 2002ರಲ್ಲಿ ಸಲ್ಲಿಕೆಯಾದ ಡಾ. ಡಿ.ಎಂ. ನಂಜುಂಡಪ್ಪ ವರದಿಯು ಇಂದಿಗೂ ಈ ಭಾಗದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ. ​ಹಿಂದುಳಿದಿರುವಿಕೆಯ ಕಹಿ ವಾಸ್ತವ ​ನಂಜುಂಡಪ್ಪ ಸಮಿತಿಯ…

Read More

​ಉತ್ತರ ಕರ್ನಾಟಕಕ್ಕೆ ರಾಜ್ಯ ಸರ್ಕಾರದ ಬಂಪರ್ ಕೊಡುಗೆ: 3,450 ಕೋಟಿ ರೂ. ವಿಶೇಷ ಅನುದಾನ ಘೋಷಣೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ದಶಕಗಳ ಬೇಡಿಕೆ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕವಾಗಿ ರಾಜ್ಯ ಸರ್ಕಾರವು ಬರೋಬ್ಬರಿ 3,450 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಘೋಷಿಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದ್ದು, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೊಸ ವೇಗ ಸಿಗುವ ನಿರೀಕ್ಷೆಯಿದೆ. ​ಯಾವ ಯೋಜನೆಗೆ ಎಷ್ಟು ಹಣ? (ಪ್ರಮುಖ ಹಂಚಿಕೆಗಳು): ​ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಒತ್ತು: ನಂಜುಂಡಪ್ಪ ವರದಿಯ ಆಶಯದಂತೆ ಈ ಭಾಗದ ಅಭಿವೃದ್ಧಿಗೆ ಸರ್ಕಾರ…

Read More

ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ: ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ರಾಜೇಂದ್ರ ಪ್ರಸಾದ್ ಅವರಿಗೆ ತೀವ್ರ ಗಾಯಗಳಾಗಿವೆ. ​ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸದ ನಿಮಿತ್ತ ಮಂಜುನಾಥ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮಂಜುನಾಥ್ ಅವರ…

Read More

ಶೀಘ್ರದಲ್ಲೇ 1,600 ಪಿಎಸ್‌ಐ ಹುದ್ದೆಗಳ ನೇಮಕಾತಿ: ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ

ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,600 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಇಲಾಖೆಯ ಬಲವರ್ಧನೆಗೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ​ಈ ಹಿಂದೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿದ್ದ ಅಕ್ರಮ…

Read More

ಬೆಳಗಾವಿ ಏತ ನೀರಾವರಿ ಯೋಜನೆಗಳ ಪ್ರಗತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶೀಲನಾ ಸಭೆ

ಬೆಳಗಾವಿ, ಡಿ. 10: ಬೆಳಗಾವಿ ಜಿಲ್ಲೆಯ ಪ್ರಮುಖ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದುವಾರದಂದು (ಡಿ.10) ಸಭೆ ನಡೆಸಿ ಪರಿಶೀಲನೆ ನಡೆಸಿದರು. ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ), ರಾಮದುರ್ಗ ತಾಲ್ಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ​ಬಸವೇಶ್ವರ ಏತ ನೀರಾವರಿ ಯೋಜನೆ ​ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ 22 ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ…

Read More