ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಖಾನೆ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕಾರ್ಖಾನೆ ಮಾಲೀಕರು ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ರೈತರ ಜತೆಗೆ ಕಾರ್ಖಾನೆ ಮಾಲೀಕರು ಹಾಗೂ ಕೇಂದ್ರ ಸರ್ಕಾರ ನಿಲ್ಲಬೇಕಿತ್ತು. ಆದರೆ, ಈಗ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆ…

Read Full News

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ ಬೆಳಗಾವಿ: ನಿಯಮಬಾಹಿರ ಹಾಗೂ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜಂಟಿ ತಂಡ ಸುದೀರ್ಘ ದಾಳಿ ನಡೆಸಿ ಶುಕ್ರವಾರ ಈ ಕ್ರಮ ಕೈಗೊಂಡಿದೆ. ಆರೋಪಿ ಶಿವಾನಂದ ಯಾವುದೇ ಆರ್‌ಬಿಐ ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸಿರುವುದು…

Read Full News

ಬೆಳಗಾವಿ: ಖ್ಯಾತ ವಕೀಲೆ ಪೂಜಾ ಕಾಕತಕರ್ ನಿವಾಸದ ಮೇಲೆ ಗುಂಡಿನ ದಾಳಿ; ಪುತ್ರಿ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಗರದ ಮಂಡೋಳಿ ರಸ್ತೆಯಲ್ಲಿರುವ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಅವಧಿಯಲ್ಲಿ ಈ ಕೃತ್ಯ ನಡೆದಿದ್ದು, ಇಡೀ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ​ದುಷ್ಕರ್ಮಿಗಳು ಪೂಜಾ ಅವರ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿದ್ದಾರೆ. ಆ ಸಮಯದಲ್ಲಿ ಮೊದಲ ಮಹಡಿಯ ಕೊಠಡಿಯಲ್ಲಿ ಪೂಜಾ…

Read Full News

ಬೆಳಗಾವಿ: ಕುಡಿಯುವ ನೀರಿಗಾಗಿ ವಡಗಾಂವ್‌ನಲ್ಲಿ ಮಹಿಳೆಯರ ಆಕ್ರೋಶ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ

ಬೆಳಗಾವಿ: “ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ” ಎಂಬ ಮಾತಿಗೆ ಇಂದು ವಡಗಾಂವ್‌ನ ರಾಯತ ಗಲ್ಲಿಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಮೂಲಭೂತ ಸೌಕರ್ಯವಾದ ಕುಡಿಯುವ ನೀರಿಗಾಗಿ ಬೀದಿಗಿಳಿದ ಮಹಿಳೆಯರು, ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ನಿಂತ ಪರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ​ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದ ರಾಯತ ಗಲ್ಲಿಯ ನಿವಾಸಿಗಳು, ಇಂದು ಮಹಾನಗರ ಪಾಲಿಕೆಯ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರು…

Read Full News

ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರಿಗೆ ಮೂಲಸೌಕರ್ಯ ಕೊರತೆ: ಸಮಗ್ರ ಅಭಿವೃದ್ಧಿಗೆ ನವಯುಗ ಸಂಘಟನೆ ಆಗ್ರಹ

ಬೆಳಗಾವಿ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಶ್ರೀ ಯಲ್ಲಮ್ಮನ ಗುಡ್ಡಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕನಿಷ್ಠ ಮೂಲಸೌಕರ್ಯಗಳೂ ಇಲ್ಲದೆ ತೀವ್ರ ತೊಂದರೆಯಾಗುತ್ತಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ‘ನವಯುಗ ಸಂಘಟನೆ’ಯು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರತಿ ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ಲಕ್ಷಾಂತರ ಜನ ಸೇರುವ ಈ ಪುಣ್ಯಕ್ಷೇತ್ರದಲ್ಲಿ ವ್ಯವಸ್ಥೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಸಂಘಟನೆಯು ಆಕ್ರೋಶ ವ್ಯಕ್ತಪಡಿಸಿದೆ. ​ಜೋಗುಳ ಭಾವಿ ಹಾಗೂ ಸತ್ಯವ್ವಾ ದೇವಸ್ಥಾನದ ಬಳಿ ಮಹಿಳಾ ಭಕ್ತರಿಗೆ…

Read Full News

​ಬೈಲಹೊಂಗಲ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತ; ಬಿಸಿ ಪದಾರ್ಥ ಸೋರಿಕೆಯಾಗಿ ಮೂವರು ಕಾರ್ಮಿಕರ ಸಾವು ಕೆಲವರಿಗೆ ಗಾಯ,

​ಬೈಲಹೊಂಗಲ: ತಾಲ್ಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಎವಿಸಿಪಿ ನಂ-1ರ ಕಂಪಾರ್ಟ್‌ಮೆಂಟ್ ವಾಲ್ ದುರಸ್ತಿ ಕಾರ್ಯದ ವೇಳೆ ಏಕಾಏಕಿ ಕುದಿಯುವ ಬಿಸಿ ಪದಾರ್ಥ ಸೋರಿಕೆಯಾದ ಪರಿಣಾಮ ಈ ಸಾವು-ನೋವು ಸಂಭವಿಸಿದೆ. ​ಸುಮಾರು 40 ಅಡಿ ಎತ್ತರದಲ್ಲಿರುವ ವಾಲ್ ದುರಸ್ತಿ ಕಾರ್ಯಕ್ಕಾಗಿ ಎವಿಸಿಪಿ ನಂ-1ನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾರ್ಮಿಕರು ವಾಲ್‌ನ ನಟ್ ಬೋಲ್ಟ್‌ಗಳನ್ನು ತೆಗೆಯುತ್ತಿದ್ದ…

Read Full News

​ಬೈಲಹೊಂಗಲ: ಭೂಪರಿಹಾರ ವಿಳಂಬ; ಉಪವಿಭಾಗಾಧಿಕಾರಿಗಳ ವಾಹನ, ಕಂಪ್ಯೂಟರ್‌ಗಳ ಜಪ್ತಿ

​ಬೈಲಹೊಂಗಲ: ಪಟ್ಟಣದ ಒಳಚರಂಡಿ ಮತ್ತು ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿಗೆ ನ್ಯಾಯಯುತ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಸೋಮವಾರ ಉಪವಿಭಾಗಾಧಿಕಾರಿಗಳ (ಎಸಿ) ಸರ್ಕಾರಿ ವಾಹನ ಹಾಗೂ ಕಂಪ್ಯೂಟರ್‌ ಸೇರಿದಂತೆ ವಿವಿಧ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ​ಪಟ್ಟಣದ ಒಳಚರಂಡಿ ಯೋಜನೆಗಾಗಿ ನಬೀಸಾಬ ಬೇಪಾರಿ, ಇಮಾಮಹುಸೇನ ಬೇಪಾರಿ ಸೇರಿದಂತೆ ಅವರ ಕುಟುಂಬದ ಒಟ್ಟು 14 ಎಕರೆ 13 ಗುಂಟೆ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ರೈತರು…

Read Full News

​ಪ್ರಾಂತೀಯ ಅಸಮಾನತೆ ನಿವಾರಣೆಗೆ ನಮ್ಮ ಸರ್ಕಾರ ಬದ್ಧ: ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

​ಬೆಳಗಾವಿ: “ರಾಜ್ಯದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ಮತ್ತು ಉತ್ತರ ಕರ್ನಾಟಕದ ನಡುವಿನ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಸದನದಲ್ಲಿ ನಡೆದ ಸುದೀರ್ಘ ಚರ್ಚೆಗೆ ಉತ್ತರಿಸಿದ ಅವರು, ಅಧಿವೇಶನದ ಎರಡನೇ ದಿನವೇ ಈ ವಿಷಯದ ಬಗ್ಗೆ ಚರ್ಚೆ ಆರಂಭವಾಗಿರುವುದು ಇದೇ ಮೊದಲು ಎಂದು…

Read Full News

​ಭೂಮಿ ಜೀವದ ತೊಟ್ಟಿಲು, ಅದನ್ನು ಬಂಜೆ ಮಾಡಬಾರದು: ಮಣ್ಣಿನ ಆರೋಗ್ಯ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಳಗಾವಿ: “ಭೂಮಿಯು ಜೀವದ ತೊಟ್ಟಿಲಾಗಿದ್ದು, ಅತಿಯಾದ ರಸಗೊಬ್ಬರ ಬಳಕೆಯ ಮೂಲಕ ಅಂತಹ ಪವಿತ್ರ ಭೂಮಿಯನ್ನು ಬಂಜೆ ಮಾಡಬಾರದು. ಕೃಷಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ರೈತರು ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ​ತಾಲೂಕಿನ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಮಾಡುವ ನೂತನ ಯೋಜನೆಗೆ…

Read Full News

​ವಿಶೇಷ ವರದಿ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ಮತ್ತು ನಂಜುಂಡಪ್ಪ ವರದಿಯ ಮರುಚಿಂತನೆ – ಹಿಂದುಳಿದಿರುವಿಕೆ ನೀಗಲು ಬೇಕಿದೆ ಕಠಿಣ ಸಂಕಲ್ಪ

​ಬೆಳಗಾವಿ/ಹುಬ್ಬಳ್ಳಿ: ಕರ್ನಾಟಕ ರಾಜ್ಯವು ಆರ್ಥಿಕವಾಗಿ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿ ಬೆಳೆಯುತ್ತಿದ್ದರೂ, ‘ಪ್ರಾದೇಶಿಕ ಅಸಮತೋಲನ’ ಎನ್ನುವ ಶಾಪ ರಾಜ್ಯವನ್ನು ದಶಕಗಳಿಂದ ಪೀಡಿಸುತ್ತಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದ್ದರೆ, ಉತ್ತರ ಕರ್ನಾಟಕದ ಜಿಲ್ಲೆಗಳು ಇಂದಿಗೂ ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯದಂತಹ ಕನಿಷ್ಠ ಸೌಲಭ್ಯಗಳಿಗಾಗಿ ಮಲತಾಯಿ ಧೋರಣೆಯನ್ನು ಎದುರಿಸುತ್ತಿವೆ. ಈ ಅಸಮಾನತೆಯನ್ನು ಹೋಗಲಾಡಿಸಲು 2002ರಲ್ಲಿ ಸಲ್ಲಿಕೆಯಾದ ಡಾ. ಡಿ.ಎಂ. ನಂಜುಂಡಪ್ಪ ವರದಿಯು ಇಂದಿಗೂ ಈ ಭಾಗದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ. ​ಹಿಂದುಳಿದಿರುವಿಕೆಯ ಕಹಿ ವಾಸ್ತವ ​ನಂಜುಂಡಪ್ಪ ಸಮಿತಿಯ…

Read Full News