ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರ: ‘ಅಟ್ರಾಸಿಟಿ’ ಕೇಸ್ ದಾಖಲು
ಬೆಳಗಾವಿ: ಮಾಜಿ ಸಂಸದ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರು ವಾಲ್ಮೀಕಿ (ನಾಯಕ) ಸಮುದಾಯದ ಬಗ್ಗೆ ಆಡಿರುವ ಅವಾಚ್ಯ ಪದಗಳ ವಿರುದ್ಧ ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದೆ. ಜಿಲ್ಲಾ ಕೇಂದ್ರ ಬೆಳಗಾವಿ ನಗರ ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಅವರ ವಿರುದ್ಧ ಪೊಲೀಸರು ಜಾತಿ ನಿಂದನೆ ಪ್ರಕರಣ (ಅಟ್ರಾಸಿಟಿ ಕೇಸ್) ದಾಖಲೆ ಮಾಡಿದ್ದಾರೆ. ರಮೇಶ ಕತ್ತಿ ಅವರ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆ ವಾಲ್ಮೀಕಿ ಸಮುದಾಯದ ನಾಯಕರು ಹಾಗೂ ವಿವಿಧ ಸಂಘಟನೆಗಳು…

