ಆರೋಗ್ಯ ಕ್ರಾಂತಿ ಗುರಿ: ಪ್ರತಿ ಜಿಲ್ಲೆಗೆ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ – ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೂ ಕಡ್ಡಾಯವಾಗಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ತಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ​ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ ಮತ್ತು ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಸಿಗಬೇಕು….

Read More

ದಸರಾ ರಜೆಯ ಮಜಾ ದುರಂತದಲ್ಲಿ ಅಂತ್ಯ: ಸಿಂಧುದುರ್ಗ ಸಮುದ್ರದಲ್ಲಿ ಮುಳುಗಿ ಬೆಳಗಾವಿಯ ಮೂವರ ಸಾವು

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬಕ್ಕೆ ಆಘಾತ; ನಾಲ್ವರು ನಾಪತ್ತೆ, ಓರ್ವ ಮಹಿಳೆ ಸ್ಥಿತಿ ಗಂಭೀರ ​ಬೆಳಗಾವಿ: ದಸರಾ ರಜೆಗಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತದಿಂದ ಲೋಂಡಾ ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಯಾಗಿದೆ. ​ಮೂವರು ಬಾಲಕರು ಸಾವು, ಓರ್ವ ಮಹಿಳೆ ಗಂಭೀರ ​ದುರಂತದಲ್ಲಿ ಮೃತರಾದವರನ್ನು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ…

Read More

ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪಾಪಿ ಭರತೇಶ ಮಿರ್ಜಿಗೆ ಗಲ್ಲು ಶಿಕ್ಷೆ, ₹10 ಲಕ್ಷ ದಂಡ

ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದ್ದು, ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಿದೆ. ರಾಯಬಾಗ ತಾಲೂಕಿನ ಗ್ರಾಮವೊಂದರಲ್ಲಿ 2019ರ ಸೆಪ್ಟೆಂಬರ್ 10ರಂದು ನಡೆದಿದ್ದ ಈ ಭೀಕರ ಕೃತ್ಯಕ್ಕೆ ಸಂಬಂಧಿಸಿ, ಅಪರಾಧಿ ಭರತೇಶ ರಾವಸಾಹೇಬ ಮಿರ್ಜಿ ಎಂಬಾತನಿಗೆ ಜಿಲ್ಲಾ ಘನ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು ಗಲ್ಲು ಶಿಕ್ಷೆ ವಿಧಿಸಿ ತೀರ್ಪು…

Read More

ಬಿಮ್ಸ್ ಆಸ್ಪತ್ರೆಯಲ್ಲಿ ನಕಲಿ ವೈದ್ಯ ವಿದ್ಯಾರ್ಥಿನಿ ಪತ್ತೆ: ಆತಂಕ ಸೃಷ್ಟಿ

ಬೆಳಗಾವಿಯ: ಬಿಮ್ಸ್ (BIMS) ಸರ್ಕಾರಿ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಎಂದು ಸುಳ್ಳು ಹೇಳಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯ ಭದ್ರತಾ ಸಿಬ್ಬಂದಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಆಸ್ಪತ್ರೆಯ ಭದ್ರತಾ ಲೋಪದ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾರವಾರ ಮೂಲದ ಸನಾ ಶೇಖ್ ಎಂಬ ಯುವತಿಯೇ ಈ ಕೃತ್ಯದ ಆರೋಪಿಯಾಗಿದ್ದಾಳೆ. ಕಳೆದ ಎರಡು ಮೂರು ತಿಂಗಳಿಂದ ಈಕೆ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೋಟ್…

Read More

ಬೋರಗಾಂವ್-ಭಾಟನಾಗನೂರ ರಸ್ತೆ ಸುಧಾರಣೆ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ

ಬೆಳಗಾವ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ್ ವೃತ್ತದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಮಂಗಳವಾರದಂದು ಚಾಲನೆ ನೀಡಿದರು. ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98)ಯ ಕಿ.ಮೀ 35.38 ರಿಂದ 38.00 ವರೆಗಿನ (ಬೋರಗಾಂವವಾಡಿ ಕ್ರಾಸ್‌ನಿಂದ ಬೋರಗಾಂವ ವೃತ್ತದವರೆಗೆ) ರಸ್ತೆಯ ದುರಸ್ತಿ ಮತ್ತು ಸುಧಾರಣಾ ಕಾರ್ಯಕ್ಕೆ ಸಂಸದರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೋರಗಾಂವ್ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಪ್ರಿಯಾಂಕ ಜಾರಕಿಹೊಳಿ, ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದರು….

Read More

₹145 ಕೋಟಿ ನಕಲಿ ಇನ್ವಾಯ್ಸ್ ಪ್ರಕರಣ: ಓರ್ವ ಬಂಧನ

ಬೆಳಗಾವಿ: ಸುಮಾರು 145 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್ವಾಯ್ಸ್‌ಗಳನ್ನು ಸೃಷ್ಟಿಸಿ, ಅಂದಾಜು 45 ಕೋಟಿ ರೂಪಾಯಿ ಜಿಎಸ್‌ಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ (ಡಿಜಿಜಿಐ) ಬೆಳಗಾವಿ ವಲಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.ಈತನನ್ನು ಬೆಂಗಳೂರಿನಲ್ಲಿ ಬಂಧಿಸಿ, ಬೆಳಗಾವಿಗೆ ಕರೆ ತಂದು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆ ವಿವರಗಳುಪ್ರಾಥಮಿಕ ತನಿಖೆಯ ಪ್ರಕಾರ, ಈ ವ್ಯಕ್ತಿ ಮತ್ತು ಆತನ ಗುಂಪು ನಕಲಿ ದಾಖಲೆಗಳನ್ನು ಬಳಸಿ ನಕಲಿ ಜಿಎಸ್‌ಟಿ ನೋಂದಣಿಗಳನ್ನು ಸೃಷ್ಟಿಸುತ್ತಿದ್ದರು….

Read More

ಲಂಚಕ್ಕೆ ಬೇಡಿಕೆ: ಬೆಳಗಾವಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಅಧಿಕಾರಿ: ಫಯಾಜ್ ಅಹ್ಮದ್ ಶೇಖ್

ಬೆಳಗಾವಿ: ಸರ್ಕಾರದ ನಿಯಮಗಳನ್ನು ಪಾಲಿಸಬೇಕಾದ ಅಧಿಕಾರಿಯೇ ಲಂಚದ ಆಸೆಗೆ ಬಿದ್ದು ಲೋಕಾಯುಕ್ತ ಬಲೆಗೆ ಬಿದ್ದಿರುವ ನಾಚಿಕೆಗೇಡಿನ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ವಿಲೇವಾರಿ ಮಾಡಲು ಗುತ್ತಿಗೆದಾರನಿಂದ ₹15,000 ಲಂಚ ಪಡೆಯುತ್ತಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಘಟನೆಯ ವಿವರ:ಶೀತಲ ಸನದಿ ಎಂಬುವವರು ತಮ್ಮ ಮರಳು ಸಾಗಾಟದ ಕೆಲಸಕ್ಕೆ ಟಾಸ್ಕ್ ಫೋರ್ಸ್…

Read More

ಶಿಂಧಿಕುರಬೇಟ ಗ್ರಾಪಂ ಸದಸ್ಯರಿಗೆ ಶಾಕ್: 26 ಜನರ ಸದಸ್ಯತ್ವ ರದ್ದು, ಆರು ವರ್ಷಗಳ ಚುನಾವಣೆಗೆ ನಿಷೇಧ!

ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯು ಬೋಗಸ್ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಅಕ್ರಮ ವರ್ಗಾವಣೆಯಲ್ಲಿ ತೊಡಗಿದ್ದು ಸಾಬೀತಾದ ಹಿನ್ನೆಲೆ, ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸೇರಿ 26 ಸದಸ್ಯರ ಸದಸ್ಯತ್ವವನ್ನು ತಕ್ಷಣದಿಂದಲೇ ರದ್ದುಗೊಳಿಸಿ, ಮುಂದಿನ ಆರು ವರ್ಷಗಳವರೆಗೆ ಚುನಾವಣೆಗೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಡಕ್ ಆದೇಶ ಹೊರಡಿಸಿದೆ.ಪಂಚಾಯತ್ ಆಡಳಿತದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ಹೇಳಲಾಗುತ್ತಿದೆ. ಗ್ರಾಪಂ ಸದಸ್ಯರ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಇಲಾಖೆ…

Read More

ಪ್ರವಾಹಕ್ಕೆ ಸಿಲುಕಿ ಅನ್ನದಾತ ಅತಂತ್ರ: ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಕಣ್ಣಿಲ್ಲವೇ?

ಚಿತ್ತಾಪುರ (ವಾಡಿ): ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೀಮಾ ಮತ್ತು ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿದ್ದು, ಚಿತ್ತಾಪುರ ತಾಲ್ಲೂಕಿನ ಅಲಕರಟಿ ಹಾಗೂ ಬೆಳವಡಗಿ ಗ್ರಾಮಗಳು ಜಲಾವೃತಗೊಂಡಿವೆ. ನೂರಾರು ಕ್ವಿಂಟಾಲ್‌ನಷ್ಟು ಹೆಸರು ಬೆಳೆ ಸಂಪೂರ್ಣವಾಗಿ ನೀರುಪಾಲಾಗಿದೆ. ಆದರೆ, ಇಷ್ಟೆಲ್ಲಾ ದೊಡ್ಡ ದುರಂತ ಸಂಭವಿಸಿದ್ದರೂ, ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಅಧಿಕ ಪ್ರಮಾಣದ ನೀರು ಬಿಡುಗಡೆಯಾಗಿರುವುದರಿಂದ ನದಿಗಳು ಅಪಾಯದ ಮಟ್ಟ ಮೀರಿ…

Read More

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಮಂಗಳವಾರದಂದು ಬೆಳಗಾವಿ ಸಮೀಪದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪರಿಶೀಲಿಸಿದರು. ‌‌ಈ ಸಮಯದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯ ಕುರಿತು ಚರ್ಚಿಸಿದರು.ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅವುಗಳನ್ನು ತ್ವರಿತವಾಗಿ ಮತ್ತು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸೂಚನೆಗಳನ್ನು ನೀಡಿದರು….

Read More