ಕೃಷ್ಣಾ, ಘಟಪ್ರಭಾ ನದಿಗಳು ಅಪಾಯ ಮಟ್ಟ ಮೀರಿ ಹರಿವು: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ, ರಸ್ತೆ ಸಂಪರ್ಕ ಕಡಿತ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಕೃಷ್ಣಾ, ಘಟಪ್ರಭಾ ಸೇರಿದಂತೆ ಏಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಅನೇಕ ಕಡೆಗಳಲ್ಲಿ ಕೆಳಮಟ್ಟದ ಸೇತುವೆ ಮತ್ತು ಬ್ಯಾರೇಜ್ಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಗೋಕಾಕ್ನಲ್ಲಿ ಪ್ರವಾಹದ ಅವಾಂತರ:ಘಟಪ್ರಭಾ ನದಿಯ ಪ್ರವಾಹ ಮತ್ತಷ್ಟು ಹೆಚ್ಚಾಗಿದ್ದು, ಹಿಡಕಲ್ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ, ಗೋಕಾಕ್ ಪಟ್ಟಣದ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಗರದ…

