ಮಂಡ್ಯ: ಮದ್ದೂರಿನಲ್ಲಿ ಬಿಗಿ ಭದ್ರತೆಯಲ್ಲಿ ಗಣೇಶ ವಿಸರ್ಜನೆ; ಬಿಜೆಪಿ, ಜೆಡಿಎಸ್ ನಾಯಕರಿಂದ ಸರ್ಕಾರದ ವಿರುದ್ಧ ವಾಗ್ದಾಳಿ
ಮಂಡ್ಯ:ಮದ್ದೂರು: ಕಳೆದ ವಾರ ಕಲ್ಲು ತೂರಾಟದ ಘಟನೆಯಿಂದ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣದಲ್ಲಿ ಇಂದು (ಬುಧವಾರ, ಸೆ. 10) ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಹಿಂದೂ ಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಬಿಜೆಪಿ, ಜೆಡಿಎಸ್ ನಾಯಕರಿಂದ ವಾಗ್ದಾಳಿ:ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ…

