ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಿರಿ, ಪ್ರೀತಿಯಿಂದ ದ್ವೇಷ ಗೆಲ್ಲಿ: ಸಿಎಂ ಸಿದ್ದರಾಮಯ್ಯ ಕರೆ; ಮೈಸೂರು ಬೌದ್ಧ ಮಹಾ ಸಮ್ಮೇಳನದಲ್ಲಿ ಮಾತು
ಮೈಸೂರು: ಜಡಗಟ್ಟಿರುವ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ, ಹೆಚ್ಚು ಜನರಿಗೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು. ಪ್ರತಿಯೊಬ್ಬರೂ ತಮ್ಮಲ್ಲಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆದು ಮನುಷ್ಯರಾಗಬೇಕು. ಪ್ರೀತಿಯಿಂದ ದ್ವೇಷವನ್ನು ಗೆಲ್ಲುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ‘ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025’ ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು…

