“ಅಂಬೇಡ್ಕರ್ ಸಂವಿಧಾನ ವಿರೋಧಿಸುವ ಆರ್‌ಎಸ್‌ಎಸ್, ಸಂಘ ಪರಿವಾರದ ಬಗ್ಗೆ ಎಚ್ಚರವಿರಲಿ”: ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವನ್ನು ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದವರು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ರಜತ ಮಹೋತ್ಸವ ಹಾಗೂ ನೂತನ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಕೇವಲ ಗಳಿಕೆಗಾಗಿ…

