ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಗೋಗಿ ಬಳಿ ₹2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಬಂಧನ
ಯಾದಗಿರಿ: ಶಹಾಪುರ ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದಂಧೆ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಚೀಟಿದಾರರಿಂದ ಖರೀದಿಸಿದ ಅಕ್ಕಿಯನ್ನು ಸಂಗ್ರಹಿಸಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕ ಬಸವರಾಜ್ ಮತ್ತು ಪಿಎಸ್ಐ ದೇವೇಂದ್ರರೆಡ್ಡಿ ಅವರು, ತೆಲಂಗಾಣ ನೋಂದಣಿ ಸಂಖ್ಯೆ ಹೊಂದಿದ್ದ ಗೂಡ್ಸ್ ವಾಹನವನ್ನು…

