ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾಗಿ ಮರಸಪ್ಪ ರವಿ ನೇಮಕ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಮಾಧ್ಯಮ ವಕ್ತಾರರಾಗಿ ಕನಕಪುರ ಪಟ್ಟಣದ ಮಳಗಾಳಿನ ಮರಸಪ್ಪ ರವಿ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮರಸಪ್ಪ ರವಿ ಅವರು ಈ ಹಿಂದೆ ಸುದೀರ್ಘ ಅವಧಿಯವರೆಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅನುಭವ ಮತ್ತು…

