ಗೋವಾದಿಂದ ಅಕ್ರಮ ಮದ್ಯ ಸಾಗಾಟ ಪತ್ತೆ: ವಿಜಯಪುರದಲ್ಲಿ ₹74.68 ಲಕ್ಷ ಮೌಲ್ಯದ ಮದ್ಯ ಜಪ್ತಿ, ನಾಲ್ವರು ವಶಕ್ಕೆ
ವಿಜಯಪುರ: ಗೋವಾದಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಬ್ರಾಂಡ್‌ಗಳ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಸುಮಾರು ₹74.68 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರ ಉಪವಿಭಾಗದ ಪೊಲೀಸರು ಗಸ್ತಿನಲ್ಲಿದ್ದ ವೇಳೆ ಮಂಗಳವಾರ ನಸುಕಿನ ಸುಮಾರು 5.30 ಗಂಟೆಗೆ ಕೊಲ್ಹಾರ ನಾಕಾ ಸಮೀಪ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ…

