ಶಿವಮೊಗ್ಗದಲ್ಲಿ ಬೆಂಳ್ಳಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್!
ಶಿವಮೊಗ್ಗ, ನ. 25 : ಭ್ರಷ್ಟಾಚಾರದ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ದಾಳಿಯ ಭಾಗವಾಗಿ ಶಿವಮೊಗ್ಗದಲ್ಲಿಯೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಎಸ್.ಐ.ಎಂ.ಎಸ್. (SIMS) ಮೆಡಿಕಲ್ ಕಾಲೇಜಿನ ಎಫ್.ಡಿ.ಎ. (ಪ್ರಥಮ ದರ್ಜೆ ಸಹಾಯಕರಾದ) ಲಕ್ಷ್ಮೀಪತಿ ಸಿ.ಎನ್. ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ….

