ಹಾವೇರಿ: ಮದುವೆ ವಂಚನೆ ಆರೋಪ: ಯುವತಿ ಆತ್ಮಹತ್ಯೆ, ಆರೋಪಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

​ಹಾವೇರಿ/ರಾಣೆಬೆನ್ನೂರು: ‘ಪ್ರೇಮಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಸಿಂಧೂರಿ ಪರಮೇಶಪ್ಪ ಪರಣ್ಣನವರ (26) ಎಂಬ ಯುವತಿ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿಯ ಸಾವಿಗೆ ಪ್ರೇಮಿ, ಆತನ ಕುಟುಂಬಸ್ಥರು ಮತ್ತು ಪೊಲೀಸರೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ರಾಣೆಬೆನ್ನೂರು ತಾಲ್ಲೂಕಿನ ಕುದರಿಹಾಳ ಗ್ರಾಮದಲ್ಲಿರುವ ಆರೋಪಿತ ಯುವಕನ ಮನೆ ಮುಂದೆ ಮೃತದೇಹವಿಟ್ಟು ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ​ವಂಚನೆ ಮತ್ತು ಪೊಲೀಸರ ನಡೆ ಬಗ್ಗೆ ಆರೋಪ: ​ಸಿಂಧೂರಿ ಮತ್ತು ಶರತ್…

Read More

ಹಾವೇರಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಿತಳಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

ಹಾನಗಲ್ಲ: ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ: ಇನ್‌ಸ್ಟಾಗ್ರಾಮ್ (Instagram) ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವಿವರ:ಆರೋಪಿಗಳು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು, ನಂತರ ಆಕೆಯನ್ನು ಪುಸಲಾಯಿಸಿ ಸರಣಿ ಅತ್ಯಾಚಾರ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ಕುಟುಂಬಸ್ಥರು ದೂರು ನೀಡಿದ ಬೆನ್ನಲ್ಲೇ ಹಾನಗಲ್ಲ ಪೊಲೀಸರು ತಕ್ಷಣ…

Read More

ಹಟ್ಟಿ ಹಬ್ಬದ ದುರಂತ: ಹಾವೇರಿಜಿಲ್ಲೆಯಲ್ಲಿ ಹೋರಿ ತಿವಿದು ನಾಲ್ವರು ಬಲಿ, ಶೋಕ ಮಡುವು

ಹಾವೇರಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಹಟ್ಟಿ ಹಬ್ಬದ ಆಚರಣೆ ವೇಳೆ ಬುಧವಾರ ಸಂಭವಿಸಿದ ನಾಲ್ಕು ಪ್ರತ್ಯೇಕ ದುರಂತಗಳಲ್ಲಿ ಕೊಬ್ಬರಿ ಹೋರಿಗಳ ತಿವಿತಕ್ಕೆ ಸಿಲುಕಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಒಂದೇ ದಿನ ನಾಲ್ಕು ಪ್ರಾಣಹಾನಿ ಸಂಭವಿಸಿರುವುದು ಜಿಲ್ಲೆಯಲ್ಲಿ ಶೋಕದ ವಾತಾವರಣಕ್ಕೆ ಕಾರಣವಾಗಿದೆ. ಹಾವೇರಿ ನಗರ, ಹಾನಗಲ್ಲ ಮತ್ತು ಹಾವೇರಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಈ ದುರ್ಘಟನೆಗಳು ನಡೆದಿವೆ. ಹಾವೇರಿ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರೆ ಅಂಗವಾಗಿ ಆಯೋಜಿಸಲಾಗಿದ್ದ ಹೋರಿ ಹಬ್ಬದ ಸ್ಪರ್ಧೆಯ ಸಂದರ್ಭದಲ್ಲಿ…

Read More

ದೇವರಗುಡ್ಡದ ದೈವವಾಣಿಯ ಕಾರಣಿಕ “ನಾಡು ಬಂಗಾರದ ಗಿಂಡಿಲೇ, ನಾಡು ಸಿರಿಯಾತಲೆ ಪರಾಕ್”

ದೇವರಗುಡ್ಡ, (ಸಮೃದ್ಧಿ): ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ದೇವರಗುಡ್ಡದಲ್ಲಿ ಶ್ರೀ ಮಾಲತೇಶ ಸ್ವಾಮಿಯ 2025ನೇ ವರ್ಷದ ಕಾರಣಿಕ (ದೈವವಾಣಿ) ನುಡಿಯಲಾಗಿದ್ದು, “ನಾಡು ಬಂಗಾರದ ಗಿಂಡಿಲೇ, ನಾಡು ಸಿರಿಯಾತಲೆ ಪರಾಕ್” ಎಂಬ ಕಾರ್ಣಿಕ ವಾಣಿ ನುಡಿಯಲಾಗುದ್ದು. ಇದರ ಅರ್ಥಾತ್ ರಾಜ್ಯದಾದ್ಯಂತ ಉತ್ತಮ ಮಳೆ-ಬೆಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. ಎಂಬ ಗೂಢಾರ್ಥವುಳ್ಳ ದೈವವಾಣಿಯನ್ನು ಪ್ರಕಟಿಸಲಾಗಿದೆ. ಈ ವರ್ಷದ ದೈವವಾಣಿಯ ವಿಶ್ಲೇಷಣೆಯ ಪ್ರಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ವಿಶೇಷವಾಗಿ ಹಿಂಗಾರು ಬೆಳೆಯು ಸಹ ಅತ್ಯಂತ…

Read More

ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ, ವಿಡಿಯೋ ಬೆದರಿಕೆ: ಇಬ್ಬರು ಆರೋಪಿಗಳ ಬಂಧನ

ಶಿಗ್ಗಾಂವಿ (ಹಾವೇರಿ ಜಿಲ್ಲೆ): ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ, ಕಾಡಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಭಿಷೇಕ್ ಲಕ್ಷ್ಮಣಪ್ಪ ಲಮಾಣಿ ಮತ್ತು ಪ್ರವೀಣ ಲಮಾಣಿ ಎಂಬ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಯಶೋಧಾ ಒಂಟಗೋಡಿ ಅವರು ತಿಳಿಸಿದ್ದಾರೆ. ಘಟನೆ ವಿವರಪಟ್ಟಣದ ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ನ ಪ್ರಥಮ…

Read More

ರಾಣೇಬೆನ್ನೂರು ವೈದ್ಯರ ಮೇಲಿನ ಹಲ್ಲೆ ಪ್ರಕರಣ: ದೂರು-ಪ್ರತಿ ದೂರು ದಾಖಲು, ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ರಾಣೇಬೆನ್ನೂರು: ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ನಗರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಗರದ ಕೋಟೆ ಓಣಿಯಲ್ಲಿರುವ ಕ್ಲಿನಿಕ್‌ಗೆ ನುಗ್ಗಿದ 20-30 ಜನರ ಗುಂಪು ವೈದ್ಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.ನಗರದ ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಈ ದಾಳಿ ನಡೆದಿದೆ. ಘಟನೆ ವೇಳೆ ಡಾ. ಗುರುಮೂರ್ತಯ್ಯ ಅವರ ಕ್ಲಿನಿಕ್ ಎದುರು ನಿಲ್ಲಿಸಿದ್ದ ಬೈಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೊಮ್ಮಾಯಿ ಕಚೇರಿ ಎದುರು ಪ್ರತಿಭಟನೆ ಕೇಂದ್ರ ಸರ್ಕಾರದಿಂದ ಸಾಲ ಮನ್ನಾ ಮಾಡುವಂತೆ ಒತ್ತಾಯ

ಹಾವೇರಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮತ್ತು ದಬ್ಬಾಳಿಕೆಗೆ ಬೇಸತ್ತ ನೊಂದ ಜನರು, ಅವುಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಗುರುವಾರ ಸಂಸದ ಬಸವರಾಜ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಾವೇರಿಯ ತಾಲ್ಲೂಕು ಪಂಚಾಯತ್ ಆವರಣದಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನಕಾರರು ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೀದಿಗೆ ಬಂದ ಬಡ ಮಹಿಳೆಯರುಪ್ರತಿಭಟನಕಾರರು ಮಾತನಾಡಿ, “ಜಿಲ್ಲೆಯಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ವಿಪರೀತವಾಗಿದೆ. ಬಡ ಮತ್ತು ಗ್ರಾಮೀಣ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸುಲಭವಾಗಿ ಸಾಲ ನೀಡಿ, ನಂತರ…

Read More

ಕಳ್ಳರ ಕೈಚಳಕ: ಹಾವೇರಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಲಕ್ಷ ರೂ. ಹೆಚ್ಚಿನ ಮೌಲ್ಯದ ಬ್ಯಾರೇಜ್ ಗೇಟ್‌ಗಳ ಕಳ್ಳತನ

ಹಾವೇರಿ: ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರುಪಯೋಗಪಡಿಸಿಕೊಂಡಿರುವ ಕಳ್ಳರು, ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಕಬ್ಬಿಣದ ಗೇಟ್‌ಗಳನ್ನು ಕಳ್ಳತನ ಮಾಡಿದ್ದಾರೆ. ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ಒಂದುವರೆ ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸುಮಾರು 98 ಗೇಟ್‌ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಲಾಖೆಯ ನಿರ್ಲಕ್ಷ್ಯವೇ ಕಳ್ಳರ ಕರಾಮತ್ತಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕಳ್ಳತನ ನಡೆದಿರುವುದು ಇದೇ ಮೊದಲಲ್ಲ. ಕಳೆದ…

Read More

ಡಿ.ಜೆ.ಗೆ ನಿರ್ಬಂಧ: ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಹಾವೇರಿಯಲ್ಲಿ ಮೊದಲ ಎಫ್‌ಐಆರ್‌ ದಾಖಲು!

ಹಾವೇರಿ: ಗಣೇಶೋತ್ಸವದ ಮೆರವಣಿಗೆಗಳಲ್ಲಿ ಡಿ.ಜೆ. (ಡಿಸ್ಕ್ ಜಾಕಿ) ಬಳಸದಂತೆ ಸರ್ಕಾರ ನೀಡಿರುವ ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಹಾವೇರಿ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ನಿಯಮ ಮೀರಿ ಡಿ.ಜೆ. ಬಳಸಿದ ಆರೋಪದಡಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ ಗಣೇಶೋತ್ಸವದ ಮೊದಲ ಎಫ್‌ಐಆರ್ ದಾಖಲಾಗಿದೆ. ಯುವ ಸಮುದಾಯ ಸಂಭ್ರಮದ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಕಾನೂನು ಕ್ರಮ ಎದುರಿಸುವುದು ಅನಿವಾರ್ಯ ಎಂಬುದನ್ನು ಈ ಘಟನೆ ಎತ್ತಿ ತೋರಿಸಿದೆ. ಘಟನೆ ವಿವರಹಾವೇರಿಯ ಸುಭಾಷ್ ವೃತ್ತದಲ್ಲಿ ‘ಹಾವೇರಿ…

Read More

ಸಾವಿನಲ್ಲೂ ಒಂದಾದ ನಂದಿಹಳ್ಳಿ ಗ್ರಾಮದ ದಂಪತಿ: ಪತಿಯ ಅಂತ್ಯಕ್ರಿಯೆಯಲ್ಲೇ ಪತ್ನಿ ಸಾವು

ಹಾವೇರಿ: “ಜೊತೆಯಾಗಿ ಬಾಳೋಣ, ಜೊತೆಯಾಗಿ ಸಾಯೋಣ” ಎಂಬ ಮಾತುಗಳೇ ಬದುಕು ಹಾಗೂ ಸಾವಿನಲ್ಲಿ ಅಕ್ಷರಶಃ ಸತ್ಯವಾಗಿವೆ. ಪತಿಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೇ ಪತ್ನಿಯೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಮೃತಪಟ್ಟ ದಂಪತಿಯನ್ನು ವೀರಬಸಪ್ಪ ಗೋಣಿಗೇರ (70) ಮತ್ತು ಬಸಮ್ಮ (60) ಎಂದು ಗುರುತಿಸಲಾಗಿದೆ. ಈ ದಂಪತಿ ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದ್ದರು. ಘಟನೆಯ ವಿವರ:ಭಾನುವಾರ ಬೆಳಿಗ್ಗೆ ವೀರಬಸಪ್ಪ ಅವರು…

Read More