ಹಾಸನದಲ್ಲಿ ದೇವರಿಗೆ ಪಾದ ರಕ್ಷೆ ಹಾರ: ವಿಜಯಪುರ ಶಾಸಕ ಯತ್ನಾಳ್ ಗರಂ
ಹಾಸನ: ರಾಜ್ಯದಲ್ಲಿ ಹಿಂದೂ ವಿಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದ ದಾರುಣ ಘಟನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ. ಈ ಘಟನೆಯನ್ನು “ಹೇಯ ಮತ್ತು ಖಂಡನೀಯ” ಎಂದು ಬಣ್ಣಿಸಿರುವ ಯತ್ನಾಳ್, ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು…

