ಚಾಮರಾಜನಗರ:ನರಬಲಿ ಪಡೆದ ಚಿರತೆ ಸೆರೆ: ಅರಣ್ಯ ಇಲಾಖೆಯ 15 ದಿನಗಳ ಕಾರ್ಯಾಚರಣೆ ಯಶಸ್ವಿ

ಚಾಮರಾಜನಗರ: ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗೆ ತೆರಳಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ನಡೆದ ಬೃಹತ್ ಕಾರ್ಯಾಚರಣೆಯ ಫಲವಾಗಿ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಸಮೀಪ ಇರಿಸಲಾಗಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿದೆ. ಇದರಿಂದ ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರು ಮೂಲದ ಹರ್ಷಿತ್ ಎಂಬ ಬಾಲಕ ತನ್ನ…

Read More

ಜಿಂಕೆಯನ್ನು ನುಂಗಿದ ಹೆಬ್ಬಾವು; ಚಲಿಸಲು ಹರಸಾಹಸ ಪಟ್ಟ ಅಪರೂಪದ ಘಟನೆ

ಮಳವಳ್ಳಿ: ಬೃಹತ್ ಗಾತ್ರದ ಹೆಬ್ಬಾವು ಜಿಂಕೆಯನ್ನು ನುಂಗಿದ ಬಳಿಕ ಚಲಿಸಲು ಹರಸಾಹಸ ಪಟ್ಟ ಅಪರೂಪದ ಘಟನೆ ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ. ನೆಟ್ಕಲ್ ಗ್ರಾಮದ ಬಳಿ ಬೆಂಗಳೂರು ಜಲಮಂಡಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್ ಹಾದು ಹೋಗುವ ಅರಣ್ಯ ಪ್ರದೇಶದ ಸಮೀಪ ಈ ಹೆಬ್ಬಾವು ಪತ್ತೆಯಾಗಿದೆ. ದೊಡ್ಡ ಗಾತ್ರದ ಜಿಂಕೆಯನ್ನು ನುಂಗಿದ್ದರಿಂದ ಹೆಬ್ಬಾವು ಚಲಿಸಲು ಸಾಧ್ಯವಾಗದೇ ಅಲ್ಲೇ ಕುಂಠಿತ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಗಮನಿಸಿದ ಸ್ಥಳೀಯ ರೈತರು ಹಾಗೂ ಜಾನುವಾರು ಮೇಯಿಸುತ್ತಿದ್ದ…

Read More

ಭಟ್ಕಳ:ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದ ಎಂಟು ಮಂದಿ ನೀರುಪಾಲು

ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಸಂಭವಿಸಿದ ದಾರುಣ ಘಟನೆಗೆ ಎಂಟು ಮಂದಿ ನೀರುಪಾಲಾಗಿದ್ದಾರೆ. ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34),…

Read More

ಬಾಲಕಿಯರನ್ನು ಪ್ರಾಣಿಗಳಂತೆ ನಡೆಸಿಕೊಂಡ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬಿ.ವೀರಪ್ಪ ಖಂಡನೆ!

ಮಂಡ್ಯ, ಮೇ.23: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯರ ವಾಸದ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಕಂಡು ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ಒಂದೇ ಕೊಠಡಿಯಲ್ಲಿ 13 ವಿದ್ಯಾರ್ಥಿನಿಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆಕ್ರೋಶಗೊಂಡ ಉಪ ಲೋಕಾಯುಕ್ತರು, “ಇವರು ಮಕ್ಕಳು ಎಂದು ತಿಳ್ಕೊಂಡಿದ್ದೀರಾ…

Read More

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಟ್ಯಾಂಕರ್–ಕ್ರೂಸರ್ ಡಿಕ್ಕಿಗೆ ಐವರು ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಡಾಪುರ–ಹಲಕರ್ಟಿ ನಡುವಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ವಾಹನ ಹಾಗೂ ವಾಡಿಯಿಂದ ಯಾದಗಿರಿಗೆ ಸಾಗುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಛಿದ್ರಗೊಂಡಿರುವ…

Read More

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ

ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ ಬೆಳಗಾವಿ: ನಿಯಮಬಾಹಿರ ಹಾಗೂ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜಂಟಿ ತಂಡ ಸುದೀರ್ಘ ದಾಳಿ ನಡೆಸಿ ಶುಕ್ರವಾರ ಈ ಕ್ರಮ ಕೈಗೊಂಡಿದೆ. ಆರೋಪಿ ಶಿವಾನಂದ ಯಾವುದೇ ಆರ್‌ಬಿಐ ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸಿರುವುದು…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ

ಹನೂರು: ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುವ ಕಾಲುನಡಿಗೆ ಮಾರ್ಗದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ದೇವರ ದರ್ಶನದ ಹಂಬಲ ಹೊತ್ತು ಬಂದಿದ್ದ ಪುಟ್ಟ ಬಾಲಕ ಪ್ರಾಣ ಕಳೆದುಕೊಂಡ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಭಕ್ತರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ​ಬೆಂಗಳೂರಿನಿಂದ ಕುಟುಂಬದವರೊಂದಿಗೆ ಬೆಟ್ಟಕ್ಕೆ ಬಂದಿದ್ದ ಹರ್ಷಿತ್, ನಾಗಮಲೆಯತ್ತ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಠಾತ್ತಾಗಿ ದಾಳಿ ಮಾಡಿದ ಚಿರತೆಯು…

Read More

ಗದಗ ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೋರ್ ಮುರಿದು ಬಿದ್ದು 21 ಜನರಿಗೆ ಗಾಯ,ಏಳು ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಗದಗ: ಜಿಲ್ಲೆಯ ಅತಿ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆ ಹೊಂದಿರುವ ಇಲ್ಲಿನ ಪ್ರಸಿದ್ಧ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ‘ಡ್ಯಾನ್ಸಿಂಗ್ ಫ್ಲೋರ್’ ಮನರಂಜನಾ ಯಂತ್ರವು ಚಾಲನೆಯಲ್ಲಿ ಇದ್ದಾಗಲೇ ತಾಂತ್ರಿಕ ದೋಷದಿಂದ ಮುರಿದು ಬಿದ್ದ ಪರಿಣಾಮ 21 ಜನರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾತ್ರಾ ಕಮಿಟಿ ಅಧ್ಯಕ್ಷರು ಸೇರಿದಂತೆ ಒಟ್ಟು 7 ಜನರ ಮೇಲೆ ಸೋಮವಾರ ಶಹರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ​ಭಾನುವಾರ ರಾತ್ರಿ ಈ ಘಟನೆ…

Read More

​ತುಂಗಭದ್ರಾ ಜಲಾಶಯ ಮುಂದಿನ 50 ವರ್ಷ ಸುಭದ್ರ: ಮೇ 15ಕ್ಕೆ 33 ಹೊಸ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ – ಡಿ.ಕೆ. ಶಿವಕುಮಾರ್

​ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ 50 ವರ್ಷಗಳ ಕಾಲ ಜಲಾಶಯವು ಅತ್ಯಂತ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಜಲಾಶಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ವಿಜಯನಗರ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸುಮಾರು 7.5 ಲಕ್ಷ ರೈತರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ​ಜಲಾಶಯದ ಸುರಕ್ಷತೆ ಹಾಗೂ ರೈತರ…

Read More

​ಗುಂಡ್ಲುಪೇಟೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಗರ್ಭಿಣಿ ಹಾಗೂ ಚಾಲಕ ದುರ್ಮರಣ

​ಚಾಮರಾಜನಗರ: ಜಿಲ್ಲೆಯ ಜನತೆ ಮಳೆ ಮತ್ತು ಬೆಳೆಯ ಲೆಕ್ಕಾಚಾರದಲ್ಲಿ ತೊಡಗಿರುವಾಗಲೇ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿಯ ಮದ್ದಯ್ಯನಹುಂಡಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗರ್ಭಿಣಿ ಮಹಿಳೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ​ಕೇರಳದಿಂದ ಚಾಮರಾಜನಗರದ ಕಡೆಗೆ ಬರುತ್ತಿದ್ದ ಕಾರಿಗೆ, ಕೇರಳದತ್ತ ತೆರಳುತ್ತಿದ್ದ ಲಾರಿ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ…

Read More