ಹನೂರು: ಹೋಟೆಲ್, ಬೇಕರಿಗಳ ಮೇಲೆ ಆಹಾರ ಇಲಾಖೆ ದಾಳಿ; 11 ಗೃಹಬಳಕೆ ಸಿಲಿಂಡರ್‌ಗಳ ವಶ
ಹನೂರು: ಪಟ್ಟಣದ ವಿವಿಧ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಬೇಕರಿಗಳ ಮೇಲೆ ಆಹಾರ ನಿರೀಕ್ಷಕರು ದಿಢೀರ್ ದಾಳಿ ನಡೆಸಿ, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ 11 ಗೃಹಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧದಂತಹ ಸನ್ನಿವೇಶಗಳಿಂದ ಅನಿಲ ಕೊರತೆ ಎದುರಾಗುತ್ತಿರುವ ಬೆನ್ನಲ್ಲೇ, ತಾಲ್ಲೂಕು ಕೇಂದ್ರದಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವ್ಯಾಪಾರ ವಹಿವಾಟಿಗೆ ಅಕ್ರಮವಾಗಿ ಬಳಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ವಸುಂಧರಾ ಅವರ ಸೂಚನೆಯ ಮೇರೆಗೆ…

