ಬೆಲಿಯೇ ಎದ್ದು ಹೋಲ ಮೈದರೆ ಇನ್ನು ಯಾರ ಮೇಲೆ ನಂಬಿಕೆ: ನಿಂಬರ್ಗಾ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಏಳು ಮಂದಿ ಸದಸ್ಯತ್ವ ರದ್ದು!
ಕಾನೂನು ಬಾಹಿರ ಚಟುವಟಿಕೆ ಮತ್ತು ಭ್ರಷ್ಟಾಚಾರ ಸಾಬೀತು; ಆರು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಆಳಂದ: ಪ್ರಜಾಪ್ರಭುತ್ವದ ತಳಹದಿಯಾದ ಗ್ರಾಮ ಪಂಚಾಯಿತಿಯಲ್ಲಿಯೇ ಭ್ರಷ್ಟಾಚಾರ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಸಾಬೀತಾದ ಘಟನೆ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದ್ದು, ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಒಟ್ಟು ಏಳು ಜನರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಈ ಮೂಲಕ ‘ಕಾವಲುಗಾರನೇ ಕಳ್ಳನಾದರೆ ಇನ್ನು ಯಾರ ಮೇಲೆ ನಂಬಿಕೆ ಇಡಬೇಕು’ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಮೂಡಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣ ಅಧಿಕಾರಿ (ಇಒ)…

