​ಪಂಚಮಸಾಲಿ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: 3 ಕೋಟಿಗಾಗಿ ಹನಿಟ್ರ್ಯಾಪ್ ಸಂಚು, ನಾಲ್ವರ ವಿರುದ್ಧ ಸ್ವಾಮೀಜಿ ಪ್ರತಿದೂರು

​ವಿಜಯಪುರ: ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಮೇಲೆ ಬೆಂಗಳೂರು ಮೂಲದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಮಾಡಿದ್ದು, ಪ್ರಕರಣವು ಈಗ ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ತಿರುವು ಪಡೆದುಕೊಂಡಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ವ್ಯವಸ್ಥಿತ ಪಿತೂರಿ ಎಂದು ತಳ್ಳಿಹಾಕಿರುವ ಶ್ರೀಗಳು, ಈಗ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ​ಬೆಂಗಳೂರು ಮೂಲದ ತ್ರಿವೇಣಿ ಎಂಬ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ…

Read More

ಲಾರಿ ಕ್ಲೀನರ್ ಸ್ಕೆಚ್‌ಗೆ ಖದೀಮರು ಫಿದಾ: ಮೋಟೆಬೆನ್ನೂರು ಹೆದ್ದಾರಿ ದರೋಡೆ ಪ್ರಕರಣದ 9 ಆರೋಪಿಗಳ ಬಂಧನ

ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇತ್ತೀಚೆಗೆ ನಡೆದಿದ್ದ ಸಿನೆಮಾ ಮಾದರಿಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 40 ಲಕ್ಷ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೀಂದ್ರಾ ಥಾರ್ ಮತ್ತು ಸ್ವಿಫ್ಟ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಯಶೋಧಾ ವಂಟಗೋಡಿ ಅವರು ಈ ಕುರಿತು…

Read More

ಹನೂರು: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ; ಐವರಿಗೆ ಗಾಯ

ಹನೂರು: ತಾಲೂಕಿನ ಲೊಕ್ಕನಹಳ್ಳಿ–ಆಂಡಿಪಾಳ್ಯ ರಸ್ತೆಯಲ್ಲಿ ಇಂದು ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಗಾಯಗೊಂಡ ಘಟನೆ ನಡೆದಿದೆ. ​ಒಡೆಯರಪಾಳ್ಯ ಗ್ರಾಮದ ನಿವಾಸಿಯೊಬ್ಬರು ಚಲಾಯಿಸುತ್ತಿದ್ದ ಕೆಎ-01 ಎಂಜೆ 1260 ನೋಂದಣಿ ಸಂಖ್ಯೆಯ ಕಾರು, ಒಡೆಯರಪಾಳ್ಯದಿಂದ ಆಂಡಿಪಾಳ್ಯದ ಕಡೆಗೆ ಅತಿವೇಗವಾಗಿ ಸಾಗುತ್ತಿತ್ತು ಎನ್ನಲಾಗಿದೆ. ರಾತ್ರಿಯ ಕತ್ತಲಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಜೋರಾಗಿ…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಭಕ್ತರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ​ಬೆಟ್ಟದ ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯು ಸಂಚರಿಸುತ್ತಿರುವುದು ಕಂಡುಬಂದಿದ್ದು, ಈ ದೃಶ್ಯಗಳನ್ನು ಭಕ್ತರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ಹಿಂದೆ ಇದೇ ಮಾರ್ಗದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಮಗುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯೇ ಇದು ಎಂದು ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು…

Read More

ಮಾತೃಶ್ರಿ. ಹೇಮಾವತಿ ವಿ. ಹೆಗ್ಗಡೆ ಜನ್ಮದಿನ: ನಿರ್ಗತಿಕರಿಗೆ ಹಣ್ಣು-ಹಂಪಲ ವಿತರಣೆ

​ರಾಣೇಬೆನ್ನೂರ : ತಾಲ್ಲೂಕಿನ ಹೊಳೆ ಆನ್ವೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ವಾತ್ಸಲ್ಯ’ ಯೋಜನೆಯಡಿ ತಾಲೂಕಿನ ಹೊಳೆ ಆನ್ವೇರಿ ಗ್ರಾಮದ ಅಸಹಾಯಕ ಸದಸ್ಯರಿಗೆ ಹಾಗೂ ನೂತನ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಂಜುನಾಥಗೌಡ ಎಂ. ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದ ಕಟ್ಟಕಡೆಯ ವ್ಯಕ್ತಿ ಹಾಗೂ ನಿರ್ಗತಿಕರ ಏಳಿಗೆಗಾಗಿ ಹತ್ತು…

Read More

ಹನೂರು: ಹಬ್ಬದ ಸಂಭ್ರಮದ ನಡುವೆಯೇ ಯುವ ಪ್ರೇಮಿಗಳ ಆತ್ಮಹತ್ಯೆ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ​ಮೃತರನ್ನು ನಕ್ಕುಂದಿ ಗ್ರಾಮದ ನಾಗೇಂದ್ರ (21) ಹಾಗೂ ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಪೊನ್ನಾಚಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ನಡೆಯುತ್ತಿದ್ದು, ಮೃತ ಯುವಕ ನಾಗೇಂದ್ರ ಇಲ್ಲಿನ ತನ್ನ ಅಜ್ಜ ಶಿವಮಾದಯ್ಯ ಅವರ ಮನೆಗೆ ಬಂದಿದ್ದ ಎನ್ನಲಾಗಿದೆ. ಕಳೆದ ಎರಡು…

Read More

ಪ್ರಾಮಾಣಿಕತೆ ಮೆರೆದ ಸಾರಿಗೆ ನಿರ್ವಾಹಕಿ: ಮಹಿಳೆಗೆ ಮರಳಿ ಸಿಕ್ಕ ಮೊಬೈಲ್

ರಾಣೇಬೆನ್ನೂರ: ಬಸ್ಸಿನಲ್ಲಿ ಆಕಸ್ಮಿಕವಾಗಿ ಬಿಟ್ಟು ಹೋಗಿದ್ದ ಮೊಬೈಲ್ ಫೋನನ್ನು ಮಹಿಳೆಯೊಬ್ಬರಿಗೆ ಮರಳಿಸುವ ಮೂಲಕ ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕಿಯೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ​ತಾಲೂಕಿನ ಮೈದೂರು ಗ್ರಾಮದ ಕೆಂಚವ್ವ ಹರಿಜನ ಎಂಬ ಮಹಿಳೆಯು ಬೆಳಿಗ್ಗೆ ರಾಣೇಬೆನ್ನೂರಿನಿಂದ ಚಂದಾಪುರಕ್ಕೆ ಹೊರಡುವ ಬಸ್ಸಿನಲ್ಲಿ ಹೊನ್ನತ್ತಿಗೆ ತೆರಳಲು ಹತ್ತಿದ್ದರು. ಹೊನ್ನತ್ತಿಯಲ್ಲಿ ಬಸ್ ಇಳಿಯುವ ಸಂದರ್ಭದಲ್ಲಿ ಅವರು ಅರಿಯದೇ ತಮ್ಮ ಮೊಬೈಲ್ ಫೋನನ್ನು ಸೀಟಿನಲ್ಲಿಯೇ ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕಿ…

Read More

ವಿಜಯನಗರ ಮಹಾವಿದ್ಯಾಲಯದಲ್ಲಿ ಜನಪದ ಸಂಭ್ರಮ: ಸಾಂಪ್ರದಾಯಿಕ ವೈಭವದೊಂದಿಗೆ ಶಿಕ್ಷಣದಲ್ಲಿ ಲಲಿತ ಕಲೆಗಳ ಉದ್ಘಾಟನೆ

ಗದಗ: ಇಲ್ಲಿನ ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ‘ಶಿಕ್ಷಣದಲ್ಲಿ ಲಲಿತ ಕಲೆ ಮತ್ತು ರಂಗಭೂಮಿ ಜನಪದ ಸಂಭ್ರಮ’ ಹಾಗೂ ವಿವಿಧ ಶಾಸ್ತ್ರೋಕ್ತ ಪೂಜಾ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು. ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕುಂಭಮೇಳವು ಜನಪದ ಕಲೆಗಳಾದ ಡೊಳ್ಳು ಕುಣಿತ, ಹಲಗೆ ವಾದನ ಹಾಗೂ ಪಿಪಿ ಊದುವಿಕೆಯೊಂದಿಗೆ ಕಳೆಗಟ್ಟಿತ್ತು. ಸಾಂಪ್ರದಾಯಿಕ ಇಳಕಲ್ ಸೀರೆಯಲ್ಲಿ ಮಿಂಚುತ್ತಿದ್ದ ಮಹಿಳಾ ಪ್ರಶಿಕ್ಷಣಾರ್ಥಿಗಳು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರೆ, ಪುರುಷ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಂಚೆ, ಜುಬ್ಬಾ ಮತ್ತು ರುಮಾಲು…

Read More

ಹನೂರು: ಕಾಡಾನೆಗಳ ದಾಳಿಗೆ ಬಾಳೆ, ಅಡಿಕೆ ತೋಟ ನಾಶ; ಕಂಗಾಲಾದ ರೈತ

​ಹನೂರು: ರೈತರು ತಮ್ಮ ಆರ್ಥಿಕ ಸಂಕಷ್ಟದ ನಡುವೆಯೂ ಬದುಕು ಕಟ್ಟಿಕೊಳ್ಳಲು ನೆಚ್ಚಿನ ತೋಟಗಳಲ್ಲಿ ಬಾಳೆ, ಅರಿಶಿನ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ ಕಾಡಿನಿಂದ ಲಗ್ಗೆ ಇಡುವ ವನ್ಯಪ್ರಾಣಿಗಳು ರೈತರ ಬೆಳೆಗಳನ್ನು ಹಾನಿ ಮಾಡಿದರೆ ಅನ್ನದಾತನ ಬದುಕು ಬೀದಿಗೆ ಬರುತ್ತದೆ ಎಂದು ವಕೀಲ ಅಶೋಕ್ ಕುಮಾರ್ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ​ತಾಲೂಕಿನ ಲೋಕನಹಳ್ಳಿ ಹೋಬಳಿಯ ಚಿಕ್ಕಮಾಲಾಪುರ ಗ್ರಾಮದ ಸರ್ವೆ ನಂಬರ್ 117/1 ರ ನಾರಾಯಣ್ ಮೂರ್ತಿ ಹಾಗೂ 117/2 ರ ದಿವ್ಯಶ್ರೀ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

Read More

ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವ ದಹನ

ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಬೋರಾಳ ಗ್ರಾಮದ ಗೌತಮ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕುರಿಗಾಹಿಯೊಬ್ಬರು ಹಾಗೂ 45 ಕುರಿಗಳು ಬೆಂಕಿಗಾಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ. ​ಬೋರಾಳ ಗ್ರಾಮದ ಶಂಕರ್ ಈರಪ್ಪ ಮೇತ್ರೆ (65) ಮೃತಪಟ್ಟ ದುರ್ದೈವಿ ಕುರಿಗಾಹಿ. ಮಂಗಳವಾರ ರಾತ್ರಿ ವೇಳೆ ಕುರಿಗಳ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಹೊರಗೆ ಮಲಗಿದ್ದ ಶಂಕರ್ ಅವರು ಒಳಗೆ ಏನಾಗುತ್ತಿದೆ ಎಂದು ನೋಡಲು ಹೋದಾಗ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಶರೀರದ ಶೇ….

Read More