ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಮೂವರು ಆರ್‌ಎಸ್‌ಐ ಸಾವು; ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ

​ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸಾವನ್ನಪ್ಪಿರುವ ಘಟನೆ ತೀವ್ರ ವಿಷಾದ ಮೂಡಿಸಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ​ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ ಹಾಗೂ ಸಚೀನ್ ಮೃತಪಟ್ಟ ದುರ್ದೈವಿಗಳು….

Read More

ಬೆಳಗಾವಿ: ಕುಡಿಯುವ ನೀರಿಗಾಗಿ ವಡಗಾಂವ್‌ನಲ್ಲಿ ಮಹಿಳೆಯರ ಆಕ್ರೋಶ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ

ಬೆಳಗಾವಿ: “ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ” ಎಂಬ ಮಾತಿಗೆ ಇಂದು ವಡಗಾಂವ್‌ನ ರಾಯತ ಗಲ್ಲಿಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಮೂಲಭೂತ ಸೌಕರ್ಯವಾದ ಕುಡಿಯುವ ನೀರಿಗಾಗಿ ಬೀದಿಗಿಳಿದ ಮಹಿಳೆಯರು, ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ನಿಂತ ಪರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ​ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದ ರಾಯತ ಗಲ್ಲಿಯ ನಿವಾಸಿಗಳು, ಇಂದು ಮಹಾನಗರ ಪಾಲಿಕೆಯ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರು…

Read More

​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್

ರಾಣೇಬೆನ್ನೂರ: ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ, ಅಲ್ಲಿ ಸುಸಂಸ್ಕೃತ ಹಾಗೂ ನೆಮ್ಮದಿಯ ವಾತಾವರಣ ಇರುತ್ತದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜಿಸುವ ಮತ್ತು ಗೌರವಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆರ್.ಸಿ. ಪಾಟೀಲ್ ಹೇಳಿದರು. ನಗರದ ಹೊರವಲಯದ ಮಾಗೋಡ ರಸ್ತೆಯಲ್ಲಿರುವ ಸಾರಿಗೆ ಘಟಕದಲ್ಲಿ ಭಾನುವಾರ ಆಯೋಜಿಸಲಾಗಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹೆಣ್ಣನ್ನು ಅಬಲೆಯೆಂದು ಹಿಯಾಳಿಸಬಾರದು. ಜನ್ಮ ನೀಡಿದ ತಾಯಿಯಿಂದ ಹಿಡಿದು ರವಿವಾರದಂದು…

Read More

ರೈತ ಸಂಘದ ಹೋರಾಟಕ್ಕೆ ಸಂದ ಜಯ: ಉಡುತೊರೆ ಯೋಜನೆಗೆ 490 ಕೋಟಿ ರೂ. ಮಂಜೂರಾತಿಗೆ ಗೌಡೆ ಗೌಡ ಹರ್ಷ

ಹನೂರು: ಕರ್ನಾಟಕ ರಾಜ್ಯ ರೈತ ಸಂಘವು ಹನೂರು ತಾಲ್ಲೂಕಿನ ರೈತರ ಹಿತರಕ್ಷಣೆಗಾಗಿ ಹಮ್ಮಿಕೊಂಡಿದ್ದ ನಿರಂತರ ಹೋರಾಟ ಹಾಗೂ ಬೆಂಗಳೂರು ವಿಧಾನಸೌಧ ಚಲೋ ಪಾದಯಾತ್ರೆಗೆ ಪ್ರತಿಫಲ ದೊರೆತಿದ್ದು, ರಾಜ್ಯ ಬಜೆಟ್‌ನಲ್ಲಿ ಉಡುತೊರೆಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಘೋಷಿಸಿರುವುದು ರೈತ ಸಂಘದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ತಿಳಿಸಿದರು. ಹನೂರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಂತ ಹಿಂದುಳಿದ ತಾಲ್ಲೂಕಾಗಿರುವ ಹನೂರಿನಲ್ಲಿ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ…

Read More

ರೈತರ ಹಿತರಕ್ಷಣೆಗಾಗಿ ಉಡುತೊರೆ ಯೋಜನೆಗೆ ರೂ. 490 ಕೋಟಿ ಅನುದಾನ: ಮಾಜಿ ಶಾಸಕ ಆರ್. ನರೇಂದ್ರ ಹರ್ಷ

ಹನೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆಗೆ ಶ್ರಮಿಸುವುದರ ಜೊತೆಗೆ, ಈಗ ಏತ ನೀರಾವರಿ ಯೋಜನೆಗಳ ಮೂಲಕ ರೈತರ ದಶಕಗಳ ಕಾಲದ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ಹಾಡಲು ಮುಂದಾಗಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ಅವರು ತಿಳಿಸಿದರು. ​ಹನೂರು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದಿನ ರಾಜ್ಯ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ಬಹುದಿನಗಳ ಕನಸಾದ ಉಡುತೊರೆಹಳ್ಳ ಜಲಾಶಯ ಏತ ನೀರಾವರಿ ಯೋಜನೆಗೆ ಸುಮಾರು 490 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿರುವುದು…

Read More

ಚಾಮರಾಜನಗರದಲ್ಲಿ ಕೈವಾರ ತಾತಯ್ಯನವರ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ: ಭಾಗವಹಿಸಲು ಗೋಪಾಲಕೃಷ್ಣ ಕರೆ

ಹನೂರು: ಸನಾತನ ಧರ್ಮದ ಶ್ರೇಷ್ಠ ಗುರುಗಳಾದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ಯೋಗಿಗಳ ಪರಿಚಯ, ಆತ್ಮಬೋಧೆ ಕುರಿತ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹನೂರು ತಾಲೂಕಿನ ಎಲ್ಲಾ ಸಮುದಾಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹನೂರು ತಾಲೂಕು ಬಣಜಿಗ/ಬಲಿಜ ಸಂಘದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಮನವಿ ಮಾಡಿದ್ದಾರೆ. ​ಈ ಕುರಿತು ಮಾಹಿತಿ ನೀಡಿದ ಅವರು, ಇದೇ ಮಾರ್ಚ್ 22, 2026ರ ಭಾನುವಾರ ಬೆಳಿಗ್ಗೆ 8:30 ಗಂಟೆಗೆ ಚಾಮರಾಜನಗರ ಜಿಲ್ಲಾ ಕೇಂದ್ರದ ವರನಟ…

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಇತಿಹಾಸ: ಕೇವಲ 28 ದಿನಗಳಲ್ಲಿ 3.41 ಕೋಟಿ ರೂ. ಹುಂಡಿ ಹಣ ಸಂಗ್ರಹ

ಹನೂರು: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಬರೋಬ್ಬರಿ 3.41 ಕೋಟಿ ರೂಪಾಯಿ ನಗದು ಸಂಗ್ರಹವಾಗುವ ಮೂಲಕ ಮಾದಪ್ಪನ ಬೆಟ್ಟದಲ್ಲಿ ದಾಖಲೆ ಬರೆಯಲಾಗಿದೆ. ​ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ…

Read More

ದಂಟಳ್ಳಿ ಏತ ನೀರಾವರಿ ಯೋಜನೆಗೆ ಆಗ್ರಹ: ರೈತರ ಅಹೋರಾತ್ರಿ ಧರಣಿ 131ನೇ ದಿನಕ್ಕೆ

ಹನೂರು: ತಾಲೂಕಿನ ವಡಕೆಹಳ್ಳದಲ್ಲಿ ಕಾವೇರಿ ನದಿಯಿಂದ ದಂಟಳ್ಳಿ ಏತನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತನೀರಾವರಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿಯು ಗುರುವಾರ 131ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟದ ಕಾವು ದಿನೇ ದಿನೇ ತೀವ್ರಗೊಳ್ಳುತ್ತಿದೆ. ​ಕಳೆದ 2025ರ ಅಕ್ಟೋಬರ್ 27ರಿಂದಲೂ ಈ ಭಾಗದ ರೈತರು, ಮಹಿಳೆಯರು ಹಾಗೂ ಮಕ್ಕಳು ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಅಂತರ್ಜಲ ಅಭಿವೃದ್ಧಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ….

Read More

​ಬಜೆಟ್‌ನಲ್ಲಿ ಹನೂರು ಕ್ಷೇತ್ರದ ರೈತರಿಗೆ ಸಿಹಿ ಸುದ್ದಿ ನಿರೀಕ್ಷೆ: ಮಾಜಿ ಶಾಸಕ ಆರ್. ನರೇಂದ್ರ ವಿಶ್ವಾಸ

​ಹನೂರು: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ಕೊಡುಗೆಗಳನ್ನು ನೀಡಲಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ತಿಳಿಸಿದರು. ​ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ತಾವು ಯಶಸ್ವಿಯಾಗಿದ್ದು, ಈ ಬಾರಿಯ ಆಯವ್ಯಯದಲ್ಲಿ ಪೂರಕ ಸ್ಪಂದನೆ ಸಿಗುವ ನಿರೀಕ್ಷೆಯಿದೆ ಎಂದರು. ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು…

Read More