ಪ್ರವಾಹ ಸಂತ್ರಸ್ತರಿಗೆ ಸಿಎಂ ಬಂಪರ್ ಪ್ಯಾಕೇಜ್: NDRF ಜೊತೆಗೆ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ!
ಕಲಬುರ್ಗಿ:ರಾಜ್ಯದ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತು ಜನಸಾಮಾನ್ಯರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಸೆ. 30) ಬೃಹತ್ ಹೆಚ್ಚುವರಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ (NDRF) ಮಾನದಂಡದ ಪರಿಹಾರದ ಜೊತೆಗೆ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ನೆರವು ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಕಲಬುರಗಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಹೆಚ್ಚುವರಿ ನೆರವಿನಿಂದ ರೈತರಿಗೆ ದ್ವಿಗುಣ ಪರಿಹಾರ ಸಿಗಲಿದೆ…

