ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ: ಕೊಪ್ಪಳದ ಮೂವರು ಕಾಮುಕರಿಗೆ ಮರಣದಂಡನೆ ಶಿಕ್ಷೆ

​ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಒಡತಿಯ ಮೇಲಿನ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಮೂವರು ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗಂಗಾವತಿಯ ಸಾಯಿನಗರದ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಅಲಿಯಾಸ್ ಚೈತನ್ಯಸಾಯಿ ಹಾಗೂ ಶರಣಪ್ಪ ಅಲಿಯಾಸ್ ಶರಣು…

Read More

​ರಂಗೋಲಿ ಚಿತ್ತಾರದಲ್ಲಿ ಅರಳಿದ ಈಶ್ವರ:

ರಾಣೇಬೆನ್ನೂರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಗರದ ಕುರುಬಗೇರಿಯ ನಿವಾಸಿ ಸರೋಜ ಕೊಪ್ಪದ ಅವರು ತಮ್ಮ ಮನೆಯಂಗಳದಲ್ಲಿ ರಂಗೋಲಿಯ ಮೂಲಕ ಶಿವಲಿಂಗದ ಅದ್ಭುತ ಚಿತ್ರಣವನ್ನು ಬಿಡಿಸಿದ್ದಾರೆ. ಭಕ್ತಿ ಮತ್ತು ಕಲೆಯ ಅಪರೂಪದ ಸಂಗಮದಂತಿದ್ದ ಈ ರಂಗೋಲಿ ಚಿತ್ತಾರವು ನೋಡುಗರ ಗಮನ ಸೆಳೆಯಿತು.

Read More

​ಮಂಡ್ಯದಲ್ಲಿ ಭೀಕರ ಕೆಮಿಕಲ್ ಟ್ಯಾಂಕ್ ಸ್ಫೋಟ: ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವು. ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಜಿಲ್ಲೆಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪವಿರುವ ‘ಕೀರ್ತಿ ಕೆಮಿಕಲ್ ಕಾರ್ಖಾನೆ’ಯಲ್ಲಿ ಭಾನುವಾರ ರಾಸಾಯನಿಕ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಭೀಕರವಾಗಿ ಮೃತಪಟ್ಟಿದ್ದಾರೆ. ಕಾರ್ಖಾನೆಯ ಸಾಮಗ್ರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ​ಛಿದ್ರಗೊಂಡ ದೇಹಗಳು: ​ಬಿಹಾರ ಮೂಲದ ಕಲೂಪ್‌ಖಾನ್ (27) ಮತ್ತು ಅಶೋಕ್ (26) ಮೃತಪಟ್ಟ ದುರ್ದೈವಿಗಳು. ಟ್ಯಾಂಕ್ ಸ್ಫೋಟಗೊಂಡ ರಭಸಕ್ಕೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡು ನೂರಾರು ಅಡಿ ದೂರಕ್ಕೆ ಎಸೆಯಲ್ಪಟ್ಟಿವೆ. ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್ ಹಾಗೂ ರಾಜೀವ್‌ಕುಮಾರ್…

Read More

​ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸೀಟು ನಿಶ್ಚಿತ; ಬರೆದಿಟ್ಟುಕೊಳ್ಳಿ: ಹಾವೇರಿಯಲ್ಲಿ ಡಿ.ಕೆ. ಶಿವಕುಮಾರ್ ವಿಶ್ವಾಸ

ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಜನಮನ ಗೆದ್ದಿವೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 141 ಸೀಟುಗಳನ್ನು ಗೆಲ್ಲುವುದು ಖಚಿತ. ನನ್ನ ಈ ಮಾತನ್ನು ಎಲ್ಲರೂ ಬರೆದಿಟ್ಟುಕೊಳ್ಳಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯ ನುಡಿದರು. ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ​ಸಂಖ್ಯಾಬಲದ ಮೇಲೆ ಅಚಲ ವಿಶ್ವಾಸ: ಹಾವೇರಿ ಜಿಲ್ಲೆಯ ಜನರು ಆರು ಮಂದಿ…

Read More

ಸಹಸ್ರ ದಿನಗಳ ಸಂಭ್ರಮ: ಹಾವೇರಿಯಲ್ಲಿ ಹಕ್ಕುಪತ್ರ ವಿತರಣೆಯೊಂದಿಗೆ ಸರ್ಕಾರದ ‘ಸಾಧನಾ ಸಮಾವೇಶ’ಕ್ಕೆ ಸಿಎಂ ಚಾಲನೆ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಒಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಾವೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ‘ಸಾಧನಾ ಸಮಾವೇಶ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳೇ ನಮ್ಮ ಬದ್ಧತೆಗೆ ಸಾಕ್ಷಿ ಎಂದು ಸಾರಿದರು. ​ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ದಾಖಲೆ: ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಕಂದಾಯ…

Read More

​ಸೂರಗೊಂಡನಕೊಪ್ಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬರುತ್ತಿದಂತೆ ಕಪ್ಪುಬಟ್ಟೆ ಪ್ರದರ್ಶನ: ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಆಕ್ರೋಶ

​ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಪವಿತ್ರ ಕ್ಷೇತ್ರ ಭಾಯಾಗಡ್‌ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವದ ವೇದಿಕೆಯು ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನಾ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಯುವಕರು ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. ​ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿ ನೀತಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಡಿಸಿಎಂ ವೇದಿಕೆಗೆ…

Read More

​ಹಾವೇರಿ: ಇಂದು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹಬ್ಬ; 1.23 ಲಕ್ಷ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯರಿಂದ ಹಕ್ಕುಪತ್ರ ವಿತರಣೆ

ಹಾವೇರಿ: ರಾಜ್ಯ ಸರ್ಕಾರದ ಒಂದು ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯನ ಗುಡಿ ಸಮೀಪ ಇಂದು ಬೃಹತ್‌ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಆಯೋಜಿಸಲಾಗಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾವೇರಿ ಸೇರಿದಂತೆ ಒಟ್ಟು 9 ಜಿಲ್ಲೆಗಳ 1.23 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಕಂದಾಯ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಹಲವು ದಶಕಗಳಿಂದ ದಾಖಲೆ ರಹಿತವಾಗಿ ಪಾಡಿ, ಹಟ್ಟಿ ಹಾಗೂ ತಾಂಡಾಗಳಲ್ಲಿ ವಾಸಿಸುತ್ತಿದ್ದ ನಿವಾಸಿಗಳಿಗೆ ಒಡೆತನ…

Read More

ಹಾವೇರಿ: ನಾಳೆ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹಬ್ಬ; ಸಾವಿರಾರು ಫಲಾನುಭವಿಗಳಿಗೆ ಭೂಮಿಯ ಹಕ್ಕು ನೀಡಲಿರುವ ಸಿಎಂ ಸಿದ್ದರಾಮಯ್ಯ

ಹಾವೇರಿ: ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಜನಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಹಾವೇರಿ ನಗರದ ಹೊರವಲಯವು ನವವಧುವಿನಂತೆ ಸಜ್ಜಾಗಿದೆ. ದಶಕಗಳಿಂದ ಭೂಮಿಯ ಹಕ್ಕು ಮತ್ತು ಸಾಗುವಳಿ ಚೀಟಿಗಾಗಿ ಕಾಯುತ್ತಿದ್ದ ಬಡವರ ಹಾಗೂ ರೈತರ ಕನಸು ನಾಳೆ ನನಸಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಜಿಲ್ಲೆಯ ಸಾವಿರಾರು ಫಲಾನುಭವಿಗಳಿಗೆ ನೇರವಾಗಿ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಸರ್ಕಾರದ ಆಶಯದಂತೆ ಪ್ರತಿಯೊಬ್ಬ ಅರ್ಹ ಭೂಹೀನನಿಗೂ ಭೂಮಿಯ ಒಡೆತನ ನೀಡುವ ಉದ್ದೇಶದೊಂದಿಗೆ ಆಯೋಜಿಸಲಾಗಿರುವ ಈ…

Read More

ಹಾವೇರಿ ಸಮಾವೇಶಕ್ಕೆ ಬಸ್ ನಿಯೋಜನೆ: ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ರೈತ ಸಂಘದ ಆತಂಕ

​ರಾಣೇಬೆನ್ನೂರು: ಹಾವೇರಿಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿರುವುದನ್ನು ರೈತ ಸಂಘಟನೆಯ ಮುಖಂಡ ಹನುಮಂತಪ್ಪ ಕಬ್ಬಾರ ತೀವ್ರವಾಗಿ ಖಂಡಿಸಿದ್ದಾರೆ. ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಈ ಕ್ರಮದಿಂದ ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆಯಾಗುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಪ್ರಸ್ತುತ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಜರುಗುತ್ತಿದ್ದು, ಶನಿವಾರವೂ ಪರೀಕ್ಷೆ ನಿಗದಿಯಾಗಿದೆ. ಇಂತಹ ಸಂದರ್ಭದಲ್ಲಿ ಹಳ್ಳಿಗಳಿಗೆ…

Read More

ಕಂಪ್ಲಿ ಉತ್ಸವಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ: ಕ್ಷೇತ್ರಕ್ಕೆ 3 ಸಾವಿರ ಹೊಸ ಮನೆಗಳ ಭರ್ಜರಿ ಕೊಡುಗೆ

ಬಳ್ಳಾರಿ: “ಕಂಪ್ಲಿ ವಿಧಾನಸಭಾ ಕ್ಷೇತ್ರದ ವಸತಿ ರಹಿತರ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ 2 ಸಾವಿರ ಮನೆಗಳನ್ನು ನೀಡಲಾಗಿತ್ತು. ಈಗ ಬರುವ ಹೊಸ ಆರ್ಥಿಕ ಸಾಲಿಗೆ ಹೆಚ್ಚುವರಿಯಾಗಿ 3 ಸಾವಿರ ಮನೆಗಳನ್ನು ಮಂಜೂರು ಮಾಡಲಾಗುವುದು. ಈ ಮೂಲಕ ಕೇವಲ ಎರಡೂವರೆ ವರ್ಷಗಳಲ್ಲಿ ಒಟ್ಟು 5 ಸಾವಿರ ಮನೆಗಳನ್ನು ಈ ಕ್ಷೇತ್ರಕ್ಕೆ ವಿತರಿಸಿದಂತಾಗುತ್ತದೆ” ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್…

Read More