ಪಂಚಮಸಾಲಿ ಪೀಠದಿಂದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಭಕ್ತರ ಮನಸ್ಸಿಗೆ ನೋವು,
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿ ಸಮುದಾಯದ ಪ್ರಮುಖ ಧ್ವನಿಯಾಗಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಈ ಮಹತ್ವದ ಬೆಳವಣಿಗೆಯಿಂದ ಭಕ್ತರು ಮತ್ತು ಅನುಯಾಯಿಗಳಿಗೆ ತೀವ್ರ ನೋವಾಗಿದ್ದು, ಸಮಾಜದಲ್ಲಿ ವ್ಯಾಪಕ ಸಂಚಲನ ಸೃಷ್ಟಿಯಾಗಿದೆ. ಪೀಠದ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹಾಗೂ ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರು ಇತ್ತೀಚೆಗೆ ನಡೆಸಿದ ಕಾರ್ಯಕಾರಿಣಿ ಸಭೆಯಲ್ಲಿ ಈ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಸ್ವಾಮೀಜಿ ವಿರುದ್ಧ ಅಕ್ರಮ ಆಸ್ತಿ…

