ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರ ದುರ್ಮರಣ, ಗದಗ ಜಿಲ್ಲೆಯ ಹರ್ಲಾಪುರ ಬಳಿ ಭೀಕರ ಅಪಘಾತ
ಗದಗ (ಸೆ. 18): ಜಿಲ್ಲೆಯ ಹರ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಗೋವಾ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರ ಪೈಕಿ ಒರ್ವ ಪೊಲೀಸ್ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಘಟನೆಯು ಗುರುವಾದಂದು ನಡೆದಿದೆ. ಕೊಪ್ಪಳದಿಂದ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹರ್ಲಾಪುರ ಬಳಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿದೆ. ಅದೇ…

