ಬರ ಅಧಿವೇಶನದಲ್ಲಿ ಹನೂರು ಶಾಸಕರ ಮೌನ ಖಂಡನೀಯ: ಬಿಜೆಪಿ ಯುವ ಮುಖಂಡ ನಿಶಾಂತ್
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ, ವಿಧಾನಸಭೆಯಲ್ಲಿ ಬರದ ಕುರಿತು ವಿಶೇಷ ಚರ್ಚೆ ನಡೆದ ಸಂದರ್ಭದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಶಾಸಕರು ಧ್ವನಿ ಎತ್ತದೆ ಮೌನ ವಹಿಸಿರುವುದು ಖಂಡನೀಯ ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ಆರೋಪಿಸಿದರು. ಹನೂರು ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ 53 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜಾನುವಾರುಗಳಿಗೆ ಮೇವಿನ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ…

