‘ಆರೆಸ್ಸೆಸ್ ಗೀತೆ ಹಾಡಿದರೆ ಸಿಎಂ ಸ್ಥಾನ ಸಿಗುತ್ತೆ ಎಂದರೆ, ನಾನು-ಚೆನ್ನಾರೆಡ್ಡಿ ಇಬ್ಬರೂ ಹಾಡುತ್ತೇವೆ’: ಸಚಿವ ಸತೀಶ್ ಜಾರಕಿಹೋಳಿ ವ್ಯಂಗ್ಯ
ಯಾದಗಿರಿ: ‘ಆರೆಸ್ಸೆಸ್ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದರೆ, ನಾನು ಮತ್ತು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಬ್ಬರೂ ಹಾಡುತ್ತೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ವಿರೋಧಿಗಳಿಗೆ ವ್ಯಂಗ್ಯವಾಡಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಸ್ಕೃತ ಭಾಷೆಯನ್ನು ಚೆನ್ನಾಗಿ ಬಲ್ಲವರಾಗಿದ್ದು, ಸಂದರ್ಭಕ್ಕೆ ಅನುಗುಣವಾಗಿ ಅಧಿವೇಶನದಲ್ಲಿ ಹಾಡಿದ್ದಾರೆ ಅಷ್ಟೇ. ಇದರ ಹಿಂದಿನ ಉದ್ದೇಶ ಬೇರೆಯೇ ಇದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿರುವುದು ಸರಿಯಲ್ಲ ಎಂದರು.ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದ…

