ರಾಗಿ ಮುದ್ದೆಗೆ ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ: ಸೊಸೆ, ಪ್ರಿಯಕರ ಬಂಧನ
ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿರುವ ಭೀಕರ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆಂಜನೇಯನನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೇನು?ಆಗಸ್ಟ್ 10ರಂದು ಅತ್ತೆ ದೇವಿರಮ್ಮ ಮೃತಪಟ್ಟಾಗ, ಕುಟುಂಬದವರು ಇದೊಂದು ಸಹಜ ಸಾವು ಎಂದು ತಿಳಿದು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ, ಕೆಲವೇ ದಿನಗಳಲ್ಲಿ…

