ದೊಡ್ಡಬಳ್ಳಾಫುರ:ಪಟಾಕಿ ಅವಘಡ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಲಕ ಸಾವು, ಹಲವರಿಗೆ ಸುಟ್ಟ ಗಾಯ
ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಪಟಾಕಿ ಅವಘಡದಿಂದ 15 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಪೊಲೀಸ್ ಕಾನ್ಸ್ಟೆಬಲ್ ಸೇರಿ ಹಲವರು ಗಾಯಗೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರಿನಲ್ಲಿ ನಡೆದಿದೆ.ಮೃತ ಬಾಲಕನನ್ನು ತನುಷ್ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತನುಷ್ ರಾವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ:ಶುಕ್ರವಾರ ಸಂಜೆ 5.30ರ ಸುಮಾರಿಗೆ ‘ಫ್ರೆಂಡ್ಸ್ ವಿನಾಯಕ ಗ್ರೂಪ್’ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಗೆ…

