ಬುರುಡೆ ಪ್ರಕರಣ: ಉಜಿರೆಯ ಮಹೇಶ್ ಶೆಟ್ಟಿ ಮನೆ ಮೇಲೆ ಎಸ್‌ಐಟಿ ದಾಳಿ
ಬೆಳ್ತಂಗಡಿ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ಮಂಗಳವಾರ (ಆ.26) ಬೆಳಗ್ಗೆ ಸುಮಾರು 9:20ಕ್ಕೆ ಎಸ್‌ಐಟಿ ತಂಡ ದಾಳಿ ನಡೆಸಿದೆ.ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಸೋಮವಾರ (ಆ.25) ಬೆಳ್ತಂಗಡಿ ನ್ಯಾಯಾಧೀಶರಿಂದ ಸರ್ಚ್ ವಾರಂಟ್ ಪಡೆದುಕೊಂಡು, ಆರೋಪಿ ಚಿನ್ನಯ್ಯನ ಜೊತೆಯಲ್ಲೇ ತಿಮರೋಡಿ ಮನೆಗೆ ಬಂದು ದಾಳಿ ನಡೆಸಿ ಪರಿಶೀಲನೆ…

