48 ಗಂಟೆಗಳಲ್ಲಿ ಅಂತರ್ ಜಿಲ್ಲಾ ಕಳ್ಳರ ಬಂಧನ: ₹4 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಹೊಸನಗರ: ತಾಲ್ಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 48 ಗಂಟೆಗಳಲ್ಲಿ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕಬಳೆ ಗ್ರಾಮದ ರಿಚರ್ಡ್ ಡಿ’ಸೋಜಾ ಮತ್ತು ಮಾಸ್ತಿಕಟ್ಟೆಯ ಶೇಷಾದ್ರಿ ಎಂಬುವವರ ಮನೆಗಳಲ್ಲಿ ಆಗಸ್ಟ್ 21ರಂದು ಕಳ್ಳತನ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ್ದ ಕಳ್ಳರು, ಗೋದ್ರೆಜ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ…

