ಸಹಸ್ರ ದಿನಗಳ ಸಂಭ್ರಮ: ಹಾವೇರಿಯಲ್ಲಿ ಹಕ್ಕುಪತ್ರ ವಿತರಣೆಯೊಂದಿಗೆ ಸರ್ಕಾರದ ‘ಸಾಧನಾ ಸಮಾವೇಶ’ಕ್ಕೆ ಸಿಎಂ ಚಾಲನೆ
ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಒಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಾವೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ‘ಸಾಧನಾ ಸಮಾವೇಶ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳೇ ನಮ್ಮ ಬದ್ಧತೆಗೆ ಸಾಕ್ಷಿ ಎಂದು ಸಾರಿದರು. ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ದಾಖಲೆ: ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಕಂದಾಯ…

