ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ: ಅಧಿಕಾರಿ ಮುನಿರಾಜು

ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿ ಮುನಿರಾಜು ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್ 30ರಿಂದ ಆಗಸ್ಟ್ 8ರವರೆಗೆ ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ಗೃಹಗೃಹ ಸಮೀಕ್ಷೆ ಕಾರ್ಯವೂ ನಡೆಯಲಿದೆ….

Read More

ಶಿಗ್ಗಾಂವ: ತಂದೆ-ತಾಯಿ, ಗುರುಗಳನ್ನು ಗೌರವಿಸಿದಾಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ: ಬಿಇಒ ಎಂ.ಬಿ. ಅಂಬಿಗೇರ

ಶಿಗ್ಗಾಂವ: ಜಗತ್ತಿನಲ್ಲಿ ಶ್ರೇಷ್ಠ ಜೀವಗಳು ಎಂದರೆ ತಂದೆ, ತಾಯಿ ಹಾಗೂ ಗುರುಗಳು. ಇವರು ನಿಸ್ವಾರ್ಥಿಗಳಾಗಿದ್ದು, ಅವರನ್ನು ಗೌರವಿಸುವುದರ ಜೊತೆಗೆ ಅವರ ಒಳ್ಳೆಯ ಮಾತುಗಳನ್ನು ಆಲಿಸಿ ಜೀವನದಲ್ಲಿ ಪಾಲಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು. ಅವರು ಬುಧವಾರ ಪಟ್ಟಣದ ಆಶ್ರಯ ಪ್ಲಾಟ್ ಸಮೀಪದ ಸರ್ಕಾರಿ ಕನ್ನಡ ಪ್ರೌಢಶಾಲೆಯಲ್ಲಿ ಮಾತ್ರೋಶ್ರೀ ಅನಸೂಯಾ ಫಕ್ಕೀರಪ್ಪ ಯಲಿಗಾರ ಸೇವಾ ಸಂಸ್ಥೆಯ ವತಿಯಿಂದ ದಿ. ಫಕ್ಕೀರಪ್ಪ ಯಲಿಗಾರ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ…

Read More

ನೆಲಮಂಗಲ:ಕರ್ತವ್ಯದ ವೇಳೆಯೇ ಸಿದ್ದರಬೆಟ್ಟದಲ್ಲಿ ಪಾರ್ಟಿ: 6 ಪಿಡಿಒಗಳು ಅಮಾನತು

ನೆಲಮಂಗಲ: ಕರ್ತವ್ಯದ ವೇಳೆಯೇ ಧಾರ್ಮಿಕ ಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಗುಂಡು-ತುಂಡಿನ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಈ ಪ್ರಕರಣದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ 10(ಡಿ) ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ. ನಡತೆ, ಶಿಸ್ತು,…

Read More

ನೆಲಮಂಗಲ:ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ

ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ ನೆಲಮಂಗಲ: ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಸರ್ಕಾರಿ ಕೆಲಸ ನೀಡಿದ್ದರೆ, ಅದನ್ನು ಗಾಳಿಗೆ ತೂರಿ ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಸಿಬ್ಬಂದಿಗಳು ಮಧ್ಯಾಹ್ನದ ವೇಳೆಯಲ್ಲೇ ಕುಡಿದು ಎಂಜಾಯ್ ಮಾಡುತ್ತಿರುವ ಕೃತ್ಯ ನೆಲಮಂಗಲ ತಾಲೂಕಿನಲ್ಲಿ ಇಂದು ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗಳ ಈ ಬೇಜವಾಬ್ದಾರಿ ಹಾಗೂ ದರ್ಬಾರ್‌ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಖಂಡನೆ…

Read More

ಬಡ್ಡಿ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ: ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಾಣಿಸಿಕೊಂಡ ಆಟೋ ಚಾಲಕನ ಸಂಸಾರ

ಕೋಲಾರ: ಸಾಲದ ಹೊರೆ ಹಾಗೂ ಬಡ್ಡಿದಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಒಂದೇ ತಿಂಗಳ ಅವಧಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮನೆ ಕಟ್ಟುವ ಕನಸಿನಿಂದ ಸಾಲ ಮಾಡಿಕೊಂಡಿದ್ದ ಕುಟುಂಬ ಕೊನೆಗೆ ಸಾಲದ ಸುಳಿಗೆ ಸಿಲುಕಿ ದಾರುಣ ಅಂತ್ಯ ಕಂಡಿರುವುದು ಜಿಲ್ಲೆಯಾದ್ಯಂತ ಮರುಕ ಮೂಡಿಸಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಆಟೋ ಚಾಲಕ ಸುರೇಶ್ ಹಾಗೂ ಅವರ ಪತ್ನಿ ಪ್ರಮೀಳಾ ದಂಪತಿಗೆ ಇಬ್ಬರು ಮಕ್ಕಳಿದ್ದರು. ಕಷ್ಟಪಟ್ಟು ದುಡಿದು ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಾ…

Read More

‘ಟೀಮ್ ಕರ್ನಾಟಕ’ವಾಗಿ ಜನರ ಸೇವೆ; ಪ್ರತಿ ವಿಧಾನಸಭೆಯಲ್ಲಿ ಜನತಾ ದರ್ಬಾರ್, ಬರ ನಿರ್ವಹಣೆಗೆ ಆದ್ಯತೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಚಿತ್ರದುರ್ಗ: ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಎಲ್ಲರೂ ‘ಟೀಮ್ ಕರ್ನಾಟಕ’ ಮನೋಭಾವದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಚಿತ್ರದುರ್ಗದಲ್ಲಿ ನಡೆದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಮಧ್ಯೆ ಸರ್ಕಾರ ಇರುವಂತೆ ನೋಡಿಕೊಳ್ಳಲು ‘ಪ್ರಜಾಸೇವಾ ಇಲಾಖೆ’ ಸ್ಥಾಪಿಸಲಾಗುತ್ತಿದ್ದು, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನರ…

Read More

ಹನೂರು:ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿ ಮುನಿರಾಜು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್…

Read More

ಹುಣಸೂರಿನಲ್ಲಿ ಭೀಕರ ಕೌಟುಂಬಿಕ ದುರಂತ: ಹೆಂಡತಿ, ಮಕ್ಕಳಿಗೆ ಪ್ಲಾಸ್ಟರ್ ಸುತ್ತಿ ಕೊಲೆ ಮಾಡಿ ವ್ಯಕ್ತಿ ಆತ್ಮಹತ್ಯೆ!

ವಿಶೇಷ ಕ್ರೈಂ ವರದಿ ಹುಣಸೂರು / ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ನಗರದ ಮಾರುತಿ ಬಡಾವಣೆಯಲ್ಲಿ ಸಮಾಜವೇ ತಲೆತಗ್ಗಿಸುವಂತಹ, ಕರುಳು ಹಿಂಡುವ ದಾರುಣ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತಾಶೆಗೊಂಡ ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮುಗ್ಧ ಮಕ್ಕಳನ್ನು ಅತ್ಯಂತ ನೃಶಂಸವಾಗಿ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬದ ಯಜಮಾನ ಹರೀಶ್, ಆತನ ಪತ್ನಿ ನಿಶ್ಚಿತಾ ಹಾಗೂ ಇವರ ಮುಗ್ಧ ಮಕ್ಕಳಾದ ನೆಕ್ಸಾ ಮತ್ತು ರಕ್ಷಾ…

Read More

ಮಳೆಯೂ ಕೈಕೊಟ್ಟಿತು, ಸರ್ಕಾರವೂ ಕೈಬಿಟ್ಟಿತು?: ಬಾಗಲಕೋಟೆಯ ಲಿಂಗಾಪುರ ಗ್ರಾಮ ಖಾಲಿ ಅಧಿಕಾರಿಗಳೇ – ಜನಪ್ರತಿನಿಧಿಗಳೇ, ಇತ್ತ ಕಣ್ಣು ಹಾಯಿಸಿ!

ಪಬ್ಲಿಕ ಸಮಾಚಾರ ವಿಶೇಷ ವರದಿ ಗುಳೇದಗುಡ್ಡ / ಬಾಗಲಕೋಟೆ: ಒಂದೆಡೆ ಕಣ್ಣೀರಾಗಿಸುವ ಭೀಕರ ಬರ, ಇನ್ನೊಂದೆಡೆ ಆಡಳಿತಾರೂಢ ಸರ್ಕಾರ ಮತ್ತು ಜನಪ್ರತಿನಿಧಿಗಳ ಭೀಕರ ನಿಷ್ಕ್ರಿಯತೆ! ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಇಂದು ಭೀಕರ ಬರದ ದವಡೆಗೆ ಸಿಲುಕಿ ಬಿಕೋ ಎನ್ನುತ್ತಿದೆ. ಊರಿಗೆ ಊರೇ ಖಾಲಿಯಾಗುತ್ತಿದ್ದರೂ, ಶಾಸಕರು, ಸಂಸದರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ನಿದ್ರೆಯಲ್ಲಿದ್ದಾರೆ ಯೇ ಎಂಬ ಸಾರ್ವಜನಿಕ ಆಕ್ರೋಶ ಮುಗಿಲುಮುಟ್ಟಿದೆ. ಬೀಗ ಬಿದ್ದ ಮನೆಗಳು, ವೃದ್ಧರ ನಿಟ್ಟುಸಿರು: ಸುಮಾರು 300ಕ್ಕೂ ಹೆಚ್ಚು ಮನೆಗಳು, 2,000ದಷ್ಟು…

Read More

ದೊಡ್ಡಿಂದುವಾಡಿ ಶಾಲೆಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ: ಪರಿಸರ ಕಾಳಜಿ, ಸ್ಮಾರ್ಟ್ ಕ್ಲಾಸ್ ಹಾಗೂ ಕೈತೋಟಕ್ಕೆ ಮೆಚ್ಚುಗೆ

ಹನೂರು: ಹನೂರು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸಿ.ಎಸ್.ಆರ್. ಅನುದಾನದಡಿ ಮೇಲ್ದರ್ಜೆಗೆ ಏರುತ್ತಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಶ್ರೀಮತಿ ಶ್ರೀರೂಪಾ ಅವರು ಶನಿವಾರ ಭೇಟಿ ನೀಡಿ, ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಶಾಲೆಗೆ ಅಗತ್ಯವಿರುವ ಇನ್ನಿತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಗಳು, ಅಡುಗೆಮನೆ ಹಾಗೂ ಬಿಸಿ ಊಟ ಯೋಜನೆಗಾಗಿ ಶಾಲಾ ಮಕ್ಕಳೇ ಬೆಳೆಸಿರುವ ಕೈತೋಟವನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಪರಿಸರ ಸಂರಕ್ಷಣೆ…

Read More