ಬೈಲಹೊಂಗಲ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತ; ಬಿಸಿ ಪದಾರ್ಥ ಸೋರಿಕೆಯಾಗಿ ಮೂವರು ಕಾರ್ಮಿಕರ ಸಾವು ಕೆಲವರಿಗೆ ಗಾಯ,
ಬೈಲಹೊಂಗಲ: ತಾಲ್ಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಎವಿಸಿಪಿ ನಂ-1ರ ಕಂಪಾರ್ಟ್‌ಮೆಂಟ್ ವಾಲ್ ದುರಸ್ತಿ ಕಾರ್ಯದ ವೇಳೆ ಏಕಾಏಕಿ ಕುದಿಯುವ ಬಿಸಿ ಪದಾರ್ಥ ಸೋರಿಕೆಯಾದ ಪರಿಣಾಮ ಈ ಸಾವು-ನೋವು ಸಂಭವಿಸಿದೆ. ಸುಮಾರು 40 ಅಡಿ ಎತ್ತರದಲ್ಲಿರುವ ವಾಲ್ ದುರಸ್ತಿ ಕಾರ್ಯಕ್ಕಾಗಿ ಎವಿಸಿಪಿ ನಂ-1ನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾರ್ಮಿಕರು ವಾಲ್‌ನ ನಟ್ ಬೋಲ್ಟ್‌ಗಳನ್ನು ತೆಗೆಯುತ್ತಿದ್ದ…

