ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ, ಅಧಿಕಾರಿಗಳಿಗೆ ತ್ವರಿತ ಕ್ರಮದ ಸೂಚನೆ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಜಿಲ್ಲಾಧಿಕಾರಿಗಳು ಹನೂರು ತಾಲ್ಲೂಕಿನ ಮಾರಟಹಳ್ಳಿ ಹಾಗೂ ಚಂಗಡಿ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸ್ಥಳದಲ್ಲೇ ಪರಿಶೀಲನೆ ನಡೆಸಿದರು. ಮಾರಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಕಾರ್ಯಪಾಲಕ ಇಂಜಿನಿಯರ್‌, ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ…

Read More

ಹನೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಕಾರ್ಯಕ್ರಮ

ವರದಿ: ಕಾರ್ತಿಕ್ ಗೌಡ, ಹನೂರ ಹನೂರು: ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗುತ್ತಿರುವುದು ಸಮಾಜಕ್ಕೆ ದೊಡ್ಡ ಅಪಾಯವಾಗಿದ್ದು, ಇದು ಸಮಾಜಘಾತುಕ ಶಕ್ತಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೊಲೀಸ್ ವೃತ್ತ ನಿರೀಕ್ಷಕ ಆನಂದಮೂರ್ತಿ ಹೇಳಿದರು. ಹನೂರು ಪೊಲೀಸ್ ಠಾಣೆಯ ವತಿಯಿಂದ ತಾಲೂಕಿನ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ,…

Read More

ಹನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ಮುಖಂಡರ ಆಗ್ರಹ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ನಿರಂತರ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹನೂರು ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹನೂರು ಮಂಡಲ ಘಟಕ ಆಗ್ರಹಿಸಿದೆ. ಮಂಡಲ ಅಧ್ಯಕ್ಷ ಕಣ್ಣೂರು ವೃಷಭೇಂದ್ರ ಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಹಶೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಮಂಡಲ ಅಧ್ಯಕ್ಷ ವೃಷಭೇಂದ್ರ ಸ್ವಾಮಿ, ಚಾಮರಾಜನಗರ ಜಿಲ್ಲೆಯ…

Read More

ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ: ಜೆಎಂಸಿ ಸರ್ವೆ ವೇಳೆ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ, ಬೈರಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ, ಜು.13: ಉದ್ದೇಶಿತ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ವಿರೋಧವಾಗಿ ರಾಮನಗರ ಜಿಲ್ಲೆಯ ಬೈರಮಂಗಲದಲ್ಲಿ ರೈತರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಂಟಿ ಅಳತೆ (ಜೆಎಂಸಿ) ಸರ್ವೆ ನಡೆಸಲು ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರೂರು ಹಾಗೂ ಭಾರಂಗಿ ವ್ಯಾಪ್ತಿಯ ರೈತರು ಬೈರಮಂಗಲ ಸರ್ಕಲ್‌ನಲ್ಲಿ ‘ಪೊರಕೆ…

Read More

11 ಲಕ್ಷ ಲಂಚ ಪ್ರಕರಣ: ಅಫಜಲಪುರ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

ಕಲಬುರಗಿ: ಏಳು ವರ್ಷಗಳ ಹಿಂದೆ ಇಡೀ ರಾಜ್ಯದ ಗಮನ ಸೆಳೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು…

Read More

ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: ಧಾರವಾಡ ಮೂಲದ 6 ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

ಕೋಲಾರ:ಮಾಲೂರಿನಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆ: 2 ಟನ್ ಅಕ್ಕಿ, ಟಾಟಾ ಏಸ್ ವಾಹನ ವಶ

ಆರೋಪಿ ಬಂಧನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಮೆಚ್ಚುಗೆ ಮಾಲೂರು, ಜು. 7: ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸುಮಾರು ₹50 ಸಾವಿರ ಮೌಲ್ಯದ 2 ಟನ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗುತ್ತಿದ್ದ ಟಾಟಾ ಏಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ್ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್ ಹಾಗೂ ಜಗದೀಶ್, ಡಿವೈಎಸ್‌ಪಿ ಕೃಷ್ಣಪ್ಪ ಅವರ…

Read More

ಪರಿಶುದ್ಧ, ಜನಪರ ಮತ್ತು ಸಮಾನತೆಯ ಆಡಳಿತವೇ ಸರ್ಕಾರದ ಗುರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಕಲಬುರಗಿ: ಪರಿಶುದ್ಧ, ಜನಪರ ಹಾಗೂ ಸಮಾನತೆಯ ಆಡಳಿತದ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೇವೆ ಮತ್ತು ನಾಗರಿಕ ಹಕ್ಕುಗಳನ್ನು ತಲುಪಿಸುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಕಲಬುರಗಿಯಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ…

Read More

ಚಿರತೆ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ; ಕುಟುಂಬಕ್ಕೆ ಸಾಂತ್ವನ

ಹನೂರು: ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಅವರ ಕುಟುಂಬವನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ ದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮನೆಯ ಮುಂಭಾಗ ಅಜ್ಜಿ ಶಿವಮ್ಮ ಹಾಗೂ ಮೊಮ್ಮಗಳು ಹರ್ಷಿತಾ ಕುಳಿತಿದ್ದಾಗ ಏಕಾಏಕಿ…

Read More