ಬಳ್ಳಾರಿ ಬ್ಯಾನರ್ ಗಲಾಟೆ ವಿಕೋಪಕ್ಕೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು
ಬಳ್ಳಾರಿ: ನಗರದ ಎಸ್.ಪಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಸಿದ್ಧತೆ ವೇಳೆ ನಡೆದ ಬ್ಯಾನರ್ ಹರಿದು ಹಾಕಿದ ಗಲಾಟೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಒಟ್ಟು 11 ಜನರ ವಿರುದ್ಧ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ನೇತೃತ್ವದಲ್ಲಿ ಎಸ್.ಪಿ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ…

