ತೂಗು ಸೇತುವೆ ಮನುಷ್ಯ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಯ ರೂವಾರಿ ಇನ್ನಿಲ್ಲ

ದಕ್ಷಿಣ ಕನ್ನಡ: ದೇಶಾದ್ಯಂತ ‘ಭಾರತದ ಸೇತುವೆ ಮನುಷ್ಯ’ (Bridge Man of India) ಹಾಗೂ ತೂಗು ಸೇತುವೆಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳ ಹಿಂದೆ ಉತ್ತರಾಖಂಡದ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಪತ್ನಿ ಉಷಾ ಅವರನ್ನು…

Read More

ಅಕ್ರಮ ಸಂಬಂಧದ ದುರಂತ ಅಂತ್ಯ: ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹ ಸುಟ್ಟ ಆರೋಪ; ತನಿಖೆ ಭೀತಿಗೆ ಆರೋಪಿ ಆತ್ಮಹತ್ಯೆ

ಮಂಡ್ಯ: ಅಕ್ರಮ ಸಂಬಂಧದ ಹಿನ್ನೆಲೆ ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿದ್ದು, ಬಳಿಕ…

Read More

ಚಿಂತಾಮಣಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಸು.ಶಿ. ಶಾಂತಕುಮಾರ್ ಹರವೆ ಆಯ್ಕೆ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚಿಂತಾಮಣಿ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11, 2026ರಂದು ಚಿಂತಾಮಣಿಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಹಾಗೂ ಸಾಹಿತಿ ಸು.ಶಿ. ಶಾಂತಕುಮಾರ್ ಹರವೆ ಅವರು ಆಯ್ಕೆಯಾಗಿದ್ದಾರೆ. ಈ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದು, ಮೈಸೂರಿನ ಪ್ರತಿನಿಧಿಯಾಗಿ ಸು.ಶಿ. ಶಾಂತಕುಮಾರ್ ಹರವೆ ಅವರು ಭಾಗವಹಿಸಿ ತಮ್ಮ ಕವನವನ್ನು…

Read More

ಟಿಬೇಟ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕರ ಗ್ರಂಥಾಲಯ ಉದ್ಘಾಟಸಿದ ಶಾಸಕ ಎಂ.ಆರ್ ಮಂಜುನಾಥ್.

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬೇಟಿಯನ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕ ಗ್ರಂಥಾಲಯವನ್ನು ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರಲ್ಲಿ ಓದುವ ಅಭ್ಯಾಸವನ್ನು ಬೆಳೆಸುವ ಉದ್ದೇಶದಿಂದ ಆರಂಭಿಸಲಾದ ಈ ಗ್ರಂಥಾಲಯವು ಶಿಕ್ಷಣ ಮತ್ತು ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ವ್ಯಾಸಂಗ ಮಾಡಬೇಕು ಎಂದು ಕರೆ…

Read More

ಮಹದೇಶ್ವರ ಬೆಟ್ಟದ ತಪ್ಪಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ: ಡಿಜಿಟಲ್ ಕಲಿಕೆಗೆ ಸ್ಮಾರ್ಟ್ ಟಿವಿ ಕೊಡುಗೆ

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯ್ ಫೌಂಡೇಷನ್, ಅಭ್ಯುದಯ ಪ್ರತಿಷ್ಠಾನ ಹಾಗೂ ತಿಲಕ್ ನಗರ ಯುವ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ 10ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಸಮಾಜಸೇವಾ ಸಂಸ್ಥೆಗಳ ಈ ಕಾರ್ಯಕ್ಕೆ ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕಗಳು,…

Read More

ಕಳಪೆ ಕಾಮಗಾರಿಗೆ ಮಕ್ಕಳ ಜೀವ ಬಲಿ? ಬಲಕುಂದಿ ಸರ್ಕಾರಿ ಶಾಲೆಯ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ; ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯದ್ವಾರದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದುರ್ಘಟನೆ ಶಾಲೆಯಲ್ಲಿನ ಕಳಪೆ ಕಾಮಗಾರಿ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ನಯನಾ ಕುಮಾರಿ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಗೇಟ್ ಆಕೆಯ ಮೇಲೆ ಬಿದ್ದ ಪರಿಣಾಮ ಮೂಗಿಗೆ ತೀವ್ರ ಪೆಟ್ಟು…

Read More

ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಯಶಸ್ವಿ: ಭಕ್ತರಿಗೆ ದರ್ಶನ ನೀಡಿದ ರಾಚೋಟೇಶ್ವರ ಶ್ರೀಗಳು; ಸದ್ಯ ಆಸ್ಪತ್ರೆಗೆ ದಾಖಲು

ಗದಗ: ಜಿಲ್ಲೆಯ ಗದಗ ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಪ್ರಸಿದ್ಧ ಬೂದೀಶ್ವರ ಮಠದ ಉತ್ತರಾಧಿಕಾರಿಯಾದ ಪೂಜ್ಯ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಲೋಕ ಕಲ್ಯಾಣ ಹಾಗೂ ವಿಶ್ವಶಾಂತಿಗಾಗಿ ಕೈಗೊಂಡಿದ್ದ 33 ದಿನಗಳ ಕಠಿಣ ಶಿವಯೋಗ ಸಮಾಧಿ ಮತ್ತು ಮೌನಾನುಷ್ಠಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 10:30ಕ್ಕೆ ಶ್ರೀಗಳು ಗರ್ಭಗುಡಿಯಿಂದ ಹೊರಬಂದು ಸಾವಿರಾರು ಭಕ್ತರಿಗೆ ದರ್ಶನ ನೀಡಿದರು. ಈ ಅಪರೂಪದ ಕ್ಷಣವು ನೆರೆದಿದ್ದ ಲಕ್ಷಾಂತರ ಭಕ್ತರ ಪಾಲಿಗೆ ಭಾವನಾತ್ಮಕ ಹಾಗೂ ಐತಿಹಾಸಿಕ ಕ್ಷಣವಾಗಿ ಪರಿಣಮಿಸಿತು. ಆದರೆ, ಶ್ರೀಗಳ ಆರೋಗ್ಯದಲ್ಲಿ…

Read More

ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ಕಾರ್ತಿಕ್ ಗೌಡ, ಹನೂರ ಚಾಮರಾಜನಗರ: ಮಲೆ ಮಹದೇಶ್ವರ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್ ಸಿಡಿದ ಪರಿಣಾಮ ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಚಾಮರಾಜನಗರದ ಕುದೇರು ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ಪ್ರಕಾಶ್ (51) ಹಾಗೂ ಕೊಳ್ಳೇಗಾಲ ಪಟ್ಟಣದ ನಿವಾಸಿ, ಒಂದು…

Read More

ರಾಯಚೂರಿನಲ್ಲಿ ಕಟ್ಟಡದ ಚಾವಣಿ ಕುಸಿತ ದುರಂತ: ಮೂವರು ವಿದ್ಯಾರ್ಥಿಗಳ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ನಗರದ ಬಸ್ ನಿಲ್ದಾಣದ ಸಮೀಪದ ವಿಆರ್‌ಎಲ್ ಕಚೇರಿ ಬಳಿ ಇರುವ ಕಟ್ಟಡವೊಂದರ ಚಾವಣಿ ಭಾನುವಾರ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ನಾಗರಾಜ್ ಕ್ಯಾದಿಗೇರಾ (21) ಹಾಗೂ ರವಿ ಕುಮಾರ ಸಮುದ್ರ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಅರ್ಜುನ್ ಕೋತಿಗುಡ್ಡ ಅವರನ್ನು ತಕ್ಷಣ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ. ಪ್ರಭು ಮಾತ್ರಳ್ಳಿ ಹಾಗೂ ಉಮೇಶ್ ಎಚ್.ಎನ್….

Read More

ಗದಗ: ಅಕ್ರಮ ಬಡ್ಡಿ ವ್ಯವಹಾರಕ್ಕೆ ಪೊಲೀಸರ ಬಿಗಿ ಕ್ರಮ: ₹60 ಲಕ್ಷ ಮೌಲ್ಯದ ಚಿನ್ನ, ₹5.5 ಲಕ್ಷ ನಗದು ವಶ

ಗದಗ: ಅಕ್ರಮ ಬಡ್ಡಿ ವ್ಯವಹಾರ, ಅತಿಯಾದ ಬಡ್ಡಿ ವಸೂಲಿ ಹಾಗೂ ಸಾಲಗಾರರಿಗೆ ಬೆದರಿಕೆ ಹಾಕುತ್ತಿರುವ ಕುರಿತು ಬಂದ ದೂರಿನ ಮೇರೆಗೆ ಗದಗ ಜಿಲ್ಲಾ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 150ಕ್ಕೂ ಹೆಚ್ಚು ಚೆಕ್‌ಗಳು, 65ಕ್ಕೂ ಹೆಚ್ಚು ಖಾಲಿ ಬಾಂಡ್‌ಗಳು, ವಿವಿಧ ಒಪ್ಪಂದ ಪತ್ರಗಳು ಹಾಗೂ ಪ್ರಮುಖ ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ 9 ಬ್ಯಾಂಕ್ ಪಾಸ್‌ಬುಕ್‌ಗಳು, 11 ಚೆಕ್‌ಬುಕ್‌ಗಳು, 5ಕ್ಕೂ ಹೆಚ್ಚು ಎಟಿಎಂ ಕಾರ್ಡ್‌ಗಳು ಹಾಗೂ 3…

Read More