ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ: ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ರಾಜೇಂದ್ರ ಪ್ರಸಾದ್ ಅವರಿಗೆ ತೀವ್ರ ಗಾಯಗಳಾಗಿವೆ. ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸದ ನಿಮಿತ್ತ ಮಂಜುನಾಥ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮಂಜುನಾಥ್ ಅವರ…

