ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉಡುಪಿ ಭೇಟಿ: ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ನವೆಂಬರ್ 28) ಉಡುಪಿಗೆ ಭೇಟಿ ನೀಡಲಿದ್ದು, ‘ಲಕ್ಷ ಕಂಠ ಗೀತ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರ ಭೇಟಿ ಹಾಗೂ ಬೃಹತ್ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಮತ್ತು ಸುತ್ತಮುತ್ತಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರಧಾನಿ ಮೋದಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಬೃಹತ್ ರೋಡ್ ಶೋ ಸಹ…

