ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ಇಥೆನಾಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿಯಾದ ಲಾರಿ
ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರ ತಿರುವಿನಲ್ಲಿ ಇಥೆನಾಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದ ಘಟನೆ ಜ.31ರ ಶನಿವಾರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ಶಿವಾನಂದ ಬೀರಾದಾರ್ ಎಂಬುವವರು ಇಥೆನಾಲ್ ತುಂಬಿದ ಟ್ಯಾಂಕರ್ ಅನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು….

