ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ
ಹನೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಭಕ್ತರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಬೆಟ್ಟದ ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯು ಸಂಚರಿಸುತ್ತಿರುವುದು ಕಂಡುಬಂದಿದ್ದು, ಈ ದೃಶ್ಯಗಳನ್ನು ಭಕ್ತರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ಹಿಂದೆ ಇದೇ ಮಾರ್ಗದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಮಗುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯೇ ಇದು ಎಂದು ಶಂಕಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯಲು…

