ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಆರ್. ಸಿದ್ದರಾಜು ನೇಮಕ
ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಹನೂರು ವಿಧಾನಸಭಾ ಕ್ಷೇತ್ರದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ ಆರ್. ಸಿದ್ದರಾಜು ಅವರನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೇಮಕಾತಿ ಸಭೆಯಲ್ಲಿ ಸಿದ್ದರಾಜು ಅವರಿಗೆ ಅಧಿಕೃತವಾಗಿ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು. ಪಕ್ಷದ ಸಂಘಟನೆಗೆ ಆದ್ಯತೆ: ನೇಮಕಾತಿ ಬಳಿಕ ಮಾತನಾಡಿದ ಆರ್. ಸಿದ್ದರಾಜು ಅವರು, “ಮಾಜಿ ಶಾಸಕ…

