ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ: ಸಿಎಂ ಮೊರೆ ಹೋದ ಸಂತ್ರಸ್ತ ಮಹಿಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಮಹಿಳೆಯೊಬ್ಬರು ಅತ್ಯಂತ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆಯ ಆರೋಪ ಮಾಡಿದ್ದು, ಈ ಪ್ರಕರಣ ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಇನ್ಸ್‌ಪೆಕ್ಟರ್ ಕಿರುಕುಳ ತಾಳಲಾರದೆ ತಾಕೋಡೆ ಗ್ರಾಮದ ನೊಂದ ಮಹಿಳೆಯು ಇದೀಗ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಎಂಟು ಪುಟಗಳ ಸುದೀರ್ಘ ದೂರು ಸಲ್ಲಿಸಿದ್ದಾರೆ. ತನ್ನ ಪತಿಯನ್ನು ವಿನಾಕಾರಣ ಬಂಧಿಸಿರುವ ಇನ್ಸ್‌ಪೆಕ್ಟರ್…

